ಜ.12ರಂದು ಸೋಮಶೇಖರ್ ರೆಡ್ಡಿ ಮನೆಮುಂದೆ ಧರಣಿ: ಜಮೀರ್ ಅಹ್ಮದ್ ಖಾನ್

ಬೆಂಗಳೂರು

     ಪ್ರಚೋದನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಅವರ ಬಂಧನಕ್ಕೆ ಆಗ್ರಹಿಸಿ ಜ.12ರಂದು ಅವರ ಮನೆ ಮುಂದೆಯೇ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

    ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂದು ಪದೇ ಪದೇ ಹೇಳುತ್ತಾರೆ.ಆದರೆ, ಬಿಜೆಪಿ ಶಾಸಕರು ಅವರನ್ನು ವಿರೋಧಿಸಿ, ಸಮಾಜಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಅವರು ಮೋದಿ ಅವರ ಮಾತುಗಳನ್ನೇ ವಿರೋಧಿಸುತ್ತಿದ್ದಾರೆ ಎಂದು ದೂರಿದರು.

     ಶಾಸಕ ಸೋಮಶೇಖರ್ ರೆಡ್ಡಿ ಅವರು ಶಿವಾಜಿ ಮಹಾರಾಜರಂತೆ ಖಡ್ಗ ತೆಗೆದುಕೊಂಡು ಬರುತ್ತಾರೆ ಎಂದು ಹೇಳಿದ್ದಾರೆ.ಅವರು ಮೊದಲು ನನ್ನ ಮನೆಯ ಬಳಿಯೇ ಬರಲಿ ಎಂದು ಸವಾಲು ಹಾಕಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿವಾದಿತ ಹೇಳಿಕೆ ನೀಡಿರುವ ರೆಡ್ಡಿ ಅವರನ್ನು ಬಂಧಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link