ಬೆಂಗಳೂರು
ಸಾಧನಕೇರಿ ಧಾರವಾಡದಲ್ಲಿ ಅಕ್ಷರಜಾತ್ರೆ ನಡೆಯುತ್ತಿದ್ದು, ಸಾಹಿತ್ಯ ಸಮ್ಮೇಳನಕ್ಕೆ ಮೇಲ್ಮನೆ ಸದಸ್ಯರನ್ನು ಆಹ್ವಾನಿಸಿಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾರಿ, ಶಿಷ್ಟಾಚಾರದ ಪ್ರಕಾರ ವಿಪಕ್ಷ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿತ್ತು. ಆದರೆ ಈವರೆಗೂ ಸರ್ಕಾರವಾಗಲೀ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲೀ ಮೇಲ್ಮನೆ ಸದಸ್ಯರಿಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಯಾರೂ ಸಹ ತಮ್ಮನ್ನು ಸಂಪರ್ಕ ಮಾಡಿಲ್ಲ. ಸರ್ಕಾರದ ನಡೆಯನ್ನು ನೋಡಿದರೆ ಸಾಹಿತ್ಯ ಸಮ್ಮೇಳನಕ್ಕೆ ಪರಿಷತ್ ಸದಸ್ಯರ ಅವಶ್ಯಕತೆಯಿಲ್ಲ ಎಂಬುದು ಅರ್ಥವಾಗುತ್ತದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
