ಗುಣಮಟ್ಟದ ಶಿಕ್ಷಣ ಅಗತ್ಯ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು-

       ವಿಶ್ವದ ಟಾಪ್ 10 ವಿಶ್ವವಿದ್ಯಾಲಯಗಳ ಪೈಕಿ ನಮ್ಮ ರಾಜ್ಯದ ವಿಶ್ವವಿದ್ಯಾಲಯಗಳು ಸ್ಥಾನ ಪಡೆಯದೇ ಇರುವುದು ನಮ್ಮಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂಬುದನ್ನು ತೋರಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

      ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 127ನೇ ಜಯಂತೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

     ನಮ್ಮಲ್ಲಿ ಸಾಕಷ್ಟು ವಿಶ್ವವಿದ್ಯಾಯಗಳಿದ್ದರೂ ಗುಣಮಟ್ಟದ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದೆ. ವಿಶ್ವದ ಪ್ರಮುಖ 10 ವಿಶ್ವವಿದ್ಯಾಲಯದಲ್ಲಿ ಸರಕಾರದ ವಿವಿಗಳು ಸ್ಥಾನ ಗಳಿಸಿಲ್ಲ. ನಮ್ಮಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

    ಸಮ್ಮಿಶ್ರ ಸರಕಾರದ ಆದ್ಯತೆಯಲ್ಲಿ ಶಿಕ್ಷಣ ಪ್ರಮುಖವಾಗಿದೆ. ಈ ಕ್ಷೇತ್ರಕ್ಕೆ ಅನುದಾನ ನೀಡುವಲ್ಲಿ ಧಾರಾಳತೆ ತೋರಲಾಗಿದೆ. ಇದರ ಸದುಪಯೋಗ ಶಿಕ್ಷಣ ಸಂಸ್ಥೆಗಳು ಪಡೆದುಕೊಳ್ಳಬೇಕು ಎಂದರು.

    ಇಂದು ದೇಶದಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿದೆ. ಎಷ್ಟೇ ಎತ್ತರದ ಸ್ಥಾನಕ್ಕೇರಿದರೂ ಜಾತಿಯಿಂದ ಗುರುತಿಸುವ ಸ್ಥಿತಿ ಈಗಲೂ ಇದೆ. ನಮ್ಮದೇಶ ಮುಂದುವರೆಯ ಬೇಕಿದ್ದರೆ ಈ ವ್ಯವಸ್ಥೆಯನ್ನು ಬುಡಸಮೇತ ಕಿತ್ತು ಹಾಕಬೇಕು. ಇಲ್ಲದಿದ್ದರೆ ಅಭಿವೃದ್ಧಿ ಅಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣಸಚಿವ ಜಿ.ಟಿ.ದೇವೇಗೌಡ ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap