ಪಿಎಸ್‍ಐ ಸಿವಿಲ್ ಪರೀಕ್ಷೆ ಪ್ರಶ್ನೆ ಸೋರಿಕೆಗೆ ಸಂಚು…!!!

ಬೆಂಗಳೂರು

      ಪೊಲೀಸ್ ಪೇದೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ಈಗ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ (ಪಿಎಸ್‍ಐ) ಸಿವಿಲ್ ಹುದ್ದೆಯ ನೇಮಕಾತಿ ಪರೀಕ್ಷೆ ಪ್ರಶ್ನೆ ಸೋರಿಕೆಗೆ ಸಂಚು ರೂಪಿಸಿ ನಕಲಿ ಪ್ರಶ್ನೆಪತ್ರಿಕೆಗಳಿಂದ ಹಣ ಕಬಳಿಸಲು ಪ್ರಯತ್ನಿಸುತ್ತಿದ್ದ 13 ಕ್ಕೂ ಹೆಚ್ಚು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

       ಬೆಂಗಳೂರು, ಕಲಬುರಗಿ, ಬೆಳಗಾವಿ, ದಾವಣಗೆರೆ ಮತ್ತು ಮೈಸೂರು ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್‍ಐ (ಸಿವಿಲ್) 190 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಿತು. ತುಮಕೂರು, ಶಿವಮೊಗ್ಗ, ವಿಜಯಪುರ, ಬಾಗಲಕೋಟೆ, ಗದಗ ಸೇರಿದಂತೆ ರಾಜ್ಯದ ಹಲವೆಡೆ ನಕಲಿ ಪ್ರಶ್ನೆಪತ್ರಿಕೆ ತೋರಿಸಿ ಅಭ್ಯರ್ಥಿಗಳಿಂದ ಹಣ ಪಡೆಯಲು ಪ್ರಯತ್ನಿಸುತ್ತಿದ್ದ ಖದೀಮರನ್ನು ಸಿಸಿಬಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೆ ಪಿಎಸ್‍ಐ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಪೊಲೀಸ್ ಇಲಾಖೆಯ ಮೂಲಗಳು ಸ್ಪಷ್ಪಪಡಿಸಿವೆ.

       ಪಿಯುಸಿ ಮತ್ತು ಪೊಲೀಸ್ ಪೇದೆ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್‍ಪಿನ್ ಶಿವಕುಮಾರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಪಿಎಸ್‍ಐ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿರುವ ಬಗ್ಗೆ ಬಾಯ್ಬಿಟ್ಟಿದ್ದ. ಆರೋಪಿಗಳ ಸುಳಿವು ಪಡೆದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಡಿಸಿಪಿ ಗಿರೀಶ್ ನೇತೃತ್ವದ ತಂಡ ರಾಜ್ಯದ ಹಲವೆಡೆ ಕಾರ್ಯಾಚರಣೆ ಕೈಗೊಂಡು ಪ್ರಶ್ನೆಪತ್ರಿಕೆ ಸೋರಿಕೆ ಏಜೆಂಟ್‍ಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಡುವೆ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಲಿಖಿತ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

      ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಪ್ರಕರಣದ ಏಜೆಂಟ್ ಬಸವರಾಜ, ಹೊಳಿಯಪ್ಪ ಹಾಗೂ ನಾಗರಾಜ್ ಸೇರಿದಂತೆ ಐವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಅಲ್ಲದೇ, ಪಿಎಸ್‍ಐ ನೇಮಕಾತಿ ಪ್ರಶ್ನೆ ಪತ್ರಿಕೆ ಪಡೆಯಲು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬೆಳ್ಳಾವಿಯ ಬಸವರಾಜ್ ಎಂಬುವರ ತೋಟದ ಮನೆಗೆ ಹಣ ತೆಗೆದುಕೊಂಡು ಬಂದಿದ್ದ ಅಭ್ಯರ್ಥಿಗಳನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap