ಬೆಂಗಳೂರು
ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಆರೋಪಿಗೆ ಬೂಟು ಕಾಲಿನಿಂದ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಕೆ.ಜಿ.ಎಫ್ ತಾಲ್ಲೂಕಿನ ಬೇತಮಂಗಲ ಪೊಲೀಸ್ ಠಾಣೆಯ ಪಿ ಎಸ್ ಐ ಹೊನ್ನೇಗೌಡ ರನ್ನು ಸೇವೆಯಿಂದ ವಜಾಗೊಳಿಸಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ಜಾತಿನಿಂದನೆ ದೂರು ದಾಖಲಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ ಸಿ ಎಸ್ ರಘು ಆಗ್ರಹಿಸಿದ್ದಾರೆ.
ನಗರದ ಟೌನ್ ಹಾಲ್ ಎದರು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಪಿ.ಎಸ್.ಐ ಹೊನ್ನೇಗೌಡ ಅವರು ಆರೋಪಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಹಿಂದುಳಿದ ಜಾತಿಗೆ ಸೇರಿದವರು ಎನ್ನುವ ಬೆನ್ನಲ್ಲೇ ಜಾತಿಗೆ ಸಂಬಂಧಿಸಿದಂತೆ ಅಸಹ್ಯ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಿದರು.
ತಮ್ಮ ಬೂಟು ಕಾಲಿನಿಂದ ಹಲ್ಲೆ ನಡೆಸಿರುವ ಬೇತಮಂಗಲು ಪೊಲೀಸ್ ಠಾಣೆಯ ಪಿಎಸ್‍ಐ ಹೊನ್ನೇಗೌಡ ಹಾಗೂ ಈ ಕೃತ್ಯಕ್ಕೆ ಬೆಂಬಲಿಸಿದ ಈತನ ಸಹಚರ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಿ, ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ಜಾತಿನಿಂದನೆಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
