ಬಳ್ಳಾರಿ
ಜಿಲ್ಲೆಯಲ್ಲಿ ಇದೇ ಜ.19ರಿಂದ 22ರವರೆಗೆ ಮೊದಲ ಸುತ್ತಿನ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ನಡೆಯಲಿದ್ದು, ಎಲ್ಲರು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಮತ್ತು ಎಲ್ಲ ಬೂತ್ಗಳಲ್ಲಿ ಜನಪ್ರತಿನಿಧಿಗಳ ಮೂಲಕ ಉದ್ಘಾಟಿಸಬೇಕು. ಈ ಅಭಿಯಾನದ ಯಶಸ್ವಿಗೆ ಕೈಜೋಡಿಸಬೇಕು ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಅನಿಲಕುಮಾರ್ ತಿಳಿಸಿದರು.
ಪಲ್ಸ್ ಪೊಲೀಯೋ ಲಸಿಕಾ ಅಭಿಯಾನಕ್ಕೆ ಸಂಬಂಧಿಸಿದಂತೆ ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ತಾಲೂಕು ಮಟ್ಟದಲ್ಲಿ ಶಾಸಕ, ಸಂಸದರ ಮೂಲಕ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತಿ ಸದಸ್ಯರ ಮುಖಾಂತರ ಅದ್ಧೂರಿಯಾಗಿ ಪಲ್ಸ್ ಪೆÇೀಲಿಯೋ ಲಸಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಬೇಕು.
ಎಲ್ಲಾ ಬೂತ್ಗಳ ಉದ್ಘಾಟನೆಯನ್ನು ಅಲ್ಲಿನ ಜನಪ್ರತಿನಿಧಿಗಳ ಮೂಲಕ ಅದ್ಧೂರಿಯಾಗಿ ನೆರವೇರಿಸಿ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.2011ರ ನಂತರ ಯಾವುದೇ ಪ್ರಕರಣಗಳು ದಾಖಲಾಗಿಲ್ಲ, ವಲಸೆ ಬಂದ ಮಕ್ಕಳಲ್ಲಿ ಮಾತ್ರ ಕೆಲ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಲಸಿಕಾ ಕಾರ್ಯಕ್ರಮದ ತಯಾರಿ ಮಾಡಿಕೊಂಡಿದ್ದು ಒಟ್ಟಾರೆಯಾಗಿ 19 ತಂಡಗಳು ಕಾರ್ಯನಿರ್ವಹಿಸಲಿವೆ.
ಅದೇ ರೀತಿ ಜಿಲ್ಲೆಯ ಪ್ರತಿ ತಾಲೂಕಿನ ಆರೋಗ್ಯಾಧಿಕಾರಿಗಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಬೇಕಾದ ಸೌಲಭ್ಯಗಳ ಕುರಿತಾದ ಮಾಹಿತಿ ಹಾಗೂ ಸಲಕರಣೆಗಳ ಕುರಿತಾದ ವಿಷಯಗಳನ್ನು ಪ್ರಸ್ತಾಪ ಮಾಡಿದರು. ಸಭೆಯಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಬೇಕಾಗುವ ವಿವಿಧ ಇಲಾಖೆಗಳ ಸಹಕಾರವನ್ನು ಇದೇ ಸಂದರ್ಭದಲ್ಲಿ ಅವರು ವಿವರಿಸಿದರು.
ಸಭೆಯಲ್ಲಿ ಮೊದಲಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಕಟಣೆಯ ಪೋಸ್ಟರ್ ಮತ್ತು ಪ್ರಚಾರದ ಧ್ವನಿ ಮುದ್ರಿಕೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಶರಣಪ್ಪ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಜನಾರ್ಧನ, ಜಿಲ್ಲಾ ಶಸ್ತ್ರಚಿಕಿತ್ಸಕ ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪ, ಕಾರ್ಯಕ್ರಮ ಸಂಯೋಜನಾ ಧಿಕಾರಿ ರಾಘವೇಂದ್ರ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು, ಸಾರಿಗೆ, ಶಿಕ್ಷಣ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಇದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
