ಬೆಂಗಳೂರು:
ಪೊಲೀಸ್ ಪೇದೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಕಲ್ಮಠ ಸ್ವಾಮೀಜಿ ಕೈವಾಡವಿದೆ ಎಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಬಂಧಿತನಾಗಿರುವ ಶಿವಕುಮಾರ್ ನನ್ನ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಶಿವಕುಮಾರ್ ಕೆಲವೊಂದು ಮಹತ್ವದ ಅಂಶವನ್ನ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.ಪ್ರಮುಖವಾಗಿ ಪ್ರಶ್ನೆ ಪತ್ರಿಕೆ ಲೀಕ್ ಮಾಡೋದಕ್ಕೆ ಸ್ವಾಮೀಜಿಯೊಬ್ಬರು ಸಹಾಯ ಮಾಡಿದ್ದಾರೆ ಎಂದು ಆರೋಪಿ ಶಿವಕುಮಾರ್ ಹೇಳಿದ್ದಾನೆ ಎನ್ನಲಾಗಿದೆ.
ಇದರ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆ ಸ್ವಾಮಿಗಾಗಿ ಹುಡುಕಾಟ ಆರಂಭಿಸಿದ್ದ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯ ಕಲ್ಮಠ ಸ್ವಾಮೀಜಿಯ ಕೈವಾಡ ಇರಬಹುದು ಎಂದು ಶಂಕಿಸಲಾಗಿದೆ.
ಹೀಗಾಗಿ ಸಿಸಿಬಿ ಪೊಲೀಸರು ಸ್ವಾಮೀಜಿ ಕೈವಾಡ ಪ್ರಕರಣದಲ್ಲಿ ಇದೆಯೇ ಎಂಬುದರ ಬಗ್ಗೆ ಇದೀಗ ತನಿಖೆ ಆರಂಭಿಸಿದ್ದಾರೆ.
ಇನ್ನು ಸ್ವಾಮೀಜಿಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೂ ಸಂಬಂಧವಿದೆಯೇ?ಆರೋಪಿ ಶಿವಕುಮಾರ್ ಪಡೆದ 15 ಕೋಟಿ ಹಣ ಕೂಡ ಸ್ವಾಮೀಜಿಯ ಬಳಿಯೇ ಇದೆಯೇ?ಎಂಬ ವಿಷಯಗಳನ್ನು ಇಟ್ಟುಕೊಂಡು ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
