ದಾವಣಗೆರೆ:
ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಎಂ.ಎಸ್.ಶಿವಣ್ಣನವರ ಗೌರವಾರ್ಥ ನಗರದ ಸಿದ್ಧಗಂಗಾ ಶಾಲೆಯಲ್ಲಿ ಎಂ.ಎಸ್.ಎಸ್ ಲಿಖಿತ ಕ್ವಿಜ್-2019 ಕಾರ್ಯಕ್ರಮ ನಡೆಯಿತು.
ಎಂ.ಎಸ್.ಎಸ್. ಲಿಖಿತ ಕ್ವಿಜ್ ಸ್ಪರ್ಧೆಯಲ್ಲಿ ಎಸ್ಸೆಸ್ಸೆಲ್ಸಿ ರಾಜ್ಯ ಪಠ್ಯದ ಪರೀಕ್ಷೆ ಬರೆದಿದ್ದ ಕಲಬುರ್ಗಿ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಗದಗ, ತುಮಕೂರು, ಪಾವಗಡ, ಶಿವಮೊಗ್ಗ, ರಾಯಚೂರು, ಬೆಳಗಾವಿ, ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಕ್ವಿಜ್‍ನಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನ 25 ಸಾವಿರ ನಗದು, ದ್ವಿತೀಯ ಬಹುಮಾನ 15 ಸಾವಿರ ಹಾಗೂ ತೃತೀಯ ಬಹುಮಾನ 10 ಸಾವಿರ ಮತ್ತು ತಲಾ 1,000 ನಗದನ್ನು ಒಳಗೊಂಡ 10 ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳಿಗೆ ಕ್ವಿಜ್‍ನಲ್ಲಿ ಉತ್ತರ ಬರೆಯಲು 80 ಕೊಠಡಿಗಳಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ವಿಜ್ಞಾನ ಹಾಗೂ ಗಣಿತದ ತಲಾ 30 ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಒ.ಆರ್.ಎಂ. ಶೀಟ್‍ನಲ್ಲಿ ಉತ್ತರ ಬರೆದರು.
ಮಕ್ಕಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಹಾಗೂ ಎಂ.ಎಸ್. ಶಿವಣ್ಣ ಅವರ ಚಿತ್ರಗಳನ್ನು ಬಿಡಿಸಿದರು. ಕ್ವಿಜ್‍ನ ಫಲಿತಾಂಶವು ವಾರದೊಳಗೆ ಸಂಸ್ಥೆಯ ವೆಬ್‍ಸೈಟ್ ನಲ್ಲಿ ಪ್ರಕಟವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ