ತುರುವನೂರು ಕಾಲೇಜು ಸಮಸ್ಯೆ : ಡಿಕೆಶಿ ಸಲಹೆ ಪಡೆದ ಶಾಸಕ

ಚಳ್ಳಕೆರೆ

     ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುರುವನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರ ಮಾಡುವ ಸರ್ಕಾರದ ನಿರ್ಧಾರದ ಬಗ್ಗೆ ಅವಶ್ಯವಿದ್ದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವ ಭರವಸೆಯನ್ನು ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ಧಾರೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

     ಅವರು, ಪತ್ರಿಕೆಗೆ ಮಾಹಿತಿ ನೀಡಿ, ಬೆಂಗಳೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಕಳೆದ ಸುಮಾರು 15 ದಿನಗಳಿಂದ ತುರುವನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರದ ವಿರುದ್ದ ಹೋರಾಟ ನಡೆಸಲಾಗುತ್ತಿದ್ದು, ಮಠಾಧೀಶರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪತ್ರಕರ್ತರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಬೆಂಬಲ ನೀಡಿದ್ದು, ಕಾಲೇಜು ಸ್ಥಳಾಂತರ ಕುರಿತು ಸಲಹೆ ನೀಡಬೇಕೆಂದು ಡಿ.ಕೆ.ಶಿವಕುಮಾರ್‍ರವರಲ್ಲಿ ಶಾಸಕರು ವಿನಂತಿಸಿದಾಗ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸರ್ಕಾರ ಕಾರ್ಯನಿರ್ವಹಿಸಬೇಕಿತ್ತು. ಈ ಬಗ್ಗೆ ಅವಶ್ಯವಿದ್ದರೆ ಸಂಬಂಧಪಟ್ಟ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವ ಭರವಸೆ ನೀಡಿದ್ಧಾರೆಂದರು.

    ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, 2014-15ನೇ ಸಾಲಿನಲ್ಲಿ ಸದರಿ ಕಾಲೇಜು ಪ್ರಾರಂಭವಾಗಿದ್ದು, ಸುತ್ತಮುತ್ತಲ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳಿಗೆ ಇದು ಉಪಯುಕ್ತವಾಗಿದ್ದು, ಕಾಲೇಜು ಸ್ಥಳಾಂತರವಾಗದಂತೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link