ಬಿಜೆಪಿ ಟೀಕೆಗೆ ತಿರುಗೇಟು ನೀಡಿದ ಶಾಸಕ ಟಿ.ರಘುಮೂರ್ತಿ.

ಚಳ್ಳಕೆರೆ

      ಕಳೆದ ನೂರಾರು ವರ್ಷಗಳಿಂದ ರಾಷ್ಟ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೌಲಭ್ಯಗಳನ್ನು ನೀಡುವ ಮೂಲಕ ಈ ಸಮುದಾಯಗಳಿಗೆ ಆರ್ಥಿಕ ಶಕ್ತಿ ತುಂಬಿದವರಿಗೆ ಕಾಂಗ್ರೆಸ್ ಪಕ್ಷ ಕೇವಲ ಐದು ವರ್ಷಗಳ ಆಡಳಿತ ನಡೆಸಿದ ನರೇಂದ್ರಮೋದಿ ಈ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ಪ್ರಶ್ನಿಸುತ್ತಿದ್ಧಾರೆ. ಆದರೆ, ದೇಶದ ಜನತೆ ಕಾಂಗ್ರೆಸ್ ಕೊಡುಗೆಯನ್ನು ಎಂದೂ ಮರೆಯುವುದಿಲ್ಲವೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

       ಅವರು, ಮಂಗಳವಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರಿಗೆ ಮತ ನೀಡುವಂತೆ ಜಾಜೂರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯ ಗ್ರಾಮಗಳಾದ ನಾಗಗೊಂಡನಹಳ್ಳಿ, ಕಾಮಸಮುದ್ರ, ಜಾಜೂರು, ಹರವಿಗೊಂಡನಹಳ್ಳಿ, ಹಾಲಗೊಂಡನಹಳ್ಳಿ, ಪಗಡಲಬಂಡೆ, ಅಲ್ಲಾಪುರ, ಜುಂಜರಗುಂಟೆ ಮುಂತಾದ ಕಡೆಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

     ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳ ಸಾಧನೆಯನ್ನು ಮತದಾರರ ಗಮನಕ್ಕೆ ತರಲಾಗಿದೆ. ವಿಶೇಷವಾಗಿ ಕಳೆದ ಅವಧಿಯಲ್ಲಿ ಈ ಕ್ಷೇತ್ರದ ಸಂಸತ್ ಸದಸ್ಯರಾಗಿ ಬಿ.ಎನ್.ಚಂದ್ರಪ್ಪ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅತಿ ಹೆಚ್ಚು ಬಾರಿ ಕ್ಷೇತ್ರದಾದ್ಯಂತ ಪ್ರವಾಸ ಕೈಗೊಂಡಿದ್ಧಾರೆ.

       15 ಕೋಟಿಗೂ ಹೆಚ್ಚು ಅನುದಾನವನ್ನು ಅಭಿವೃದ್ಧಿಗಾಗಿ ನೀಡಿದ್ಧಾರೆ. ಎಲ್ಲಾ ವರ್ಗದ ಹಿತವನ್ನು ಕಾಪಾಡುವಲ್ಲಿ ಯಶಸ್ಸಿಯಾಗಿದ್ಧಾರೆ. ಅತ್ಯಂತ ಸರಳರು, ಸಜ್ಜನರೂ ಆದ ಬಿ.ಎನ್.ಚಂದ್ರಪ್ಪನವರಿಗೆ ಈ ತಿಂಗಳ 18ರಂದು ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಿ ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿ ಸೇವೆ ಮಾಡುವ ಅವಕಾಶವನ್ನು ಕಲ್ಪಿಸಿಕೊಡುವಂತೆ ಮನವಿ ಮಾಡಿದರು.

       ಜೆಡಿಎಸ್ ಯುವ ಮುಖಂಡ ರವೀಶ್‍ಕುಮಾರ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ವಿರುದ್ದ ಸ್ಪರ್ಧಿಸಿದ್ದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸೀಟುಗಳನ್ನು ಹಂಚಿಕೊಂಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಬಿ.ಎನ್.ಚಂದ್ರಪ್ಪ ಸ್ಪರ್ಧಿಸಿದ್ದಾರೆ. ಕ್ಷೇತ್ರದ ಎಲ್ಲಾ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಚಂದ್ರಪ್ಪನವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇವೆಂದರು.

      ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಮಾತನಾಡಿ, ಮತಗಳು ವಿಭಜನೆಯಾದಲ್ಲಿ ಕೋಮುವಾದಿ ಬಿಜೆಪಿ ಸುಲಭವಾಗಿ ಗೆಲುವು ಸಾಧಿಸುತ್ತದೆ. ಈ ನಿಟ್ಟಿನಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಮತವನ್ನು ಗಳಿಸಿದ್ದು, ಈ ಬಾರಿ ಎಲ್ಲಾ ಮತಗಳು ಬಿ.ಎನ್.ಚಂದ್ರಪ್ಪನವರಿಗೆ ಲಭಿಸುವುದರಿಂದ ಗೆಲುವು ಸಾಧಿಸುತ್ತಾರೆಂದರು.

      ಜೆಡಿಎಸ್ ಮುಖಂಡ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರಮೋದಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದ ಸರ್ಕಾರದ ಬಗ್ಗೆ ಸುಳ್ಳು ಆರೋಪ ಮಾಡುತ್ತಿದ್ಧಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದಂತೆ ರೈತರ ಸಾಲವನ್ನು ಮನ್ನಾ ಮಾಡಿದ್ಧಾರೆ. ಇನ್ನೂ ಅನೇಕ ಪ್ರಗತಿಪರ ಕಾರ್ಯಕ್ರಮಗಳನ್ನು ಅವರು ರೂಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಜಯಗಳಿಸುವ ವಿಶ್ವಾಸ ನಮಗೆ ಇದೆ. ಪ್ರತಿನಿತ್ಯವೂ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಗೆಲುವಿಗಾಗಿ ಶ್ರಮಿಸಲಾಗುತ್ತಿದೆ ಎಂದರು.

        ಪ್ರಚಾರ ಕಾರ್ಯದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಸಮರ್ಥರಾಯ, ನಗರಸಭಾ ಸದಸ್ಯ ಬಿ.ಟಿ.ರಮೇಶ್‍ಗೌಡ, ಮಾಜಿ ಸದಸ್ಯ ಸಿ.ಟಿ.ಶ್ರೀನಿವಾಸ್, ಡಿ.ಕೆ.ಕಾಟಯ್ಯ, ಆರ್.ಪ್ರಸನ್ನಕುಮಾರ್, ಟಿ.ಪ್ರಭುದೇವ್, ಎಸ್.ಎಚ್.ಸೈಯದ್, ಮಾಜಿ ನಗರಸಭಾ ಉಪಾಧ್ಯಕ್ಷ ಟಿ.ವಿಜಯಕುಮಾರ್, ಕೇಶವಮೂರ್ತಿ, ಗುಜ್ಜಾರಪ್ಪ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap