ಬೆಂಗಳೂರು
ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರ ಮೂರು ದಿನದ ಕಸ್ಟಡಿ ಕಾಲ ಮುಗಿದ ಹಿನ್ನೆಲೆಯಲ್ಲಿ ಇಂದು ಸಿಸಿಬಿ ಅಧಿಕಾರಿಗಳು 1ನೇ ಎಸಿಎಂಎಂ ಕೋರ್ಟ್ ನ್ಯಾಯಧೀಶರಾದ ಜಗದೀಶ್ ಅವರು ಹಾಜರುಪಡಿಸಿದರು.
ಈ ವೇಳೆ ಸಿಸಿಬಿ ಅಧಿಕಾರಿಗಳು ನ್ಯಾಯಾಧೀಶರಿಗೆ 10 ಕಾಲ ಸಿಸಿಬಿ ಕಸ್ಟಡಿ ವಿಸ್ತರಿಸುವಂತೆ ಕೋರ್ಟ್ ಗೆ ಮನವಿ ಮಾಡಿದರು. ಆದರೆ ನ್ಯಾಯಾಧೀಶರು 5 ದಿನಕ್ಕೆ ಮಾತ್ರ ಕಸ್ಟಡಿಗೆ ಆದೇಶಿಸಿದ್ದಾರೆ.ಈ ಹಿಂದೆ ರಾಗಿಣಿ ಅವರಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿದ್ದ ಹಿನ್ನಲೆಯಲ್ಲಿ ಅಂದು ಪೊಲೀಸರು ವಿಚಾರಣೆ ನಡೆಸಲಿರಲಿಲ್ಲ .
ಸದ್ಯ ಮಹಿಳಾ ಸಾಂತ್ವನ ಕೇಂದ್ರದಲ್ಲೇ ಮತ್ತೆ ಸಿಸಿಬಿ ಅಧಿಕಾರಿಗಳಿಂದ ಮತ್ತೆ ರಾಗಿಣಿ ಅವರ ವಿಚಾರಣೆ ಆರಂಭವಾಗಿದೆ.ಇನ್ಸ್‌ಪೆಕ್ಟರ್ ಪೂರ್ಣಿಮಾ ಅವರಿಂದ ವಿಚಾರಣೆ ನಡೆಯುತ್ತಿದ್ದು, ಇಂದು ರಾಗಿಣಿ ಅವರ ಸಿಸಿಬಿ ಕಸ್ಟಡಿ ಅಂತ್ಯಗೊಳ್ಳಲಿದೆ. ಹೀಗಾಗಿ ಇಂದು ಮಧ್ಯಾಹ್ನ ತನಿಖಾಧಿಕಾರಿಗಳು ರಾಗಿಣಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
