ಬೆಂಗಳೂರು :
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 14 ಕ್ಕೆ ಮುಂದೂಡಲಾಗಿದೆ.
ರಾಗಿಣಿಯ ಅರ್ಜಿ ವಿಚಾರಣೆಯನ್ನು ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಮುಂದಿನ ಸೋಮವಾರ (ಸೆಪ್ಟೆಂಬರ್ 14) ಕ್ಕೆ ಮುಂದೂಡಿದೆ.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಈ ಹಿಂದೆ ರಾಗಿಣಿಯವರ ಮನೆಯ ಮೇಲೆ ದಾಳಿ ನಡೆಸಿದ್ದರು. ನಂತರ ಆಕೆಯನ್ನು ಬಂಧಿಸಲಾಯಿತು, ಪೊಲೀಸರು ಆಕೆಯ ವಿರುದ್ಧ ಆರೋಪಿ ಎ 2 ಎಂದು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
