ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಬೆಂಗಳೂರು

      ಮಣಿಪಾಲ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೊಳಪಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

    ಸಿದ್ದರಾಮಯ್ಯ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರ ಇನ್ನೊಂದು ಸುತ್ತಿನ ಆರೋಗ್ಯ ತಪಾಸಣೆಗೊಳಪಡಲಿದ್ದಾರೆ. ಈ ನಡುವೆ, ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೂಡ ಕೋವಿಡ್ ಸೋಂಕು ದೃಢಪಟ್ಟಿದೆ.ಈ ನಡುವೆ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಅದೇ ಆಸ್ಪತ್ರೆಯಲ್ಲಿ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap