ಬೆಂಗಳೂರು
ಕಾಂಗ್ರೆಸ್ ಆಧ್ಯಕ್ಷ ರಾಹುಲ್ ಗಾಂಧಿ ಇದೇ 13 ರಂದು ಕೆ ಆರ್ ನಗರದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬೆಂಗಳೂರಿನಲ್ಲಿಂದು ನಡೆದ ಕಾಂಗ್ರೆಸ್ ಉನ್ನತ ನಾಯಕರ ಸಭೆಯ ನಂತರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಮಂಡ್ಯ, ಕೋಲಾರ ಹಾಗೂ ಚಿತ್ರದುರ್ಗದಲ್ಲಿ ಮೂರು ಕಡೆ ಬೃಹತ್ ಸಮಾವೇಶ ನಡೆಸುವ ಬಗ್ಗೆ ಸಭೆಯಲ್ಲಿ ಪೂರ್ವಭಾವಿ ಸಮಾಲೋಚನೆ ನಡೆಸಲಾಗಿದೆ ತುಮಕೂರು ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಅಸಮಾಧಾನ ನಿವಾರಣೆಗೆ ಕ್ರಮ ತೆಗೆದುಕೊಳ್ಳ ಲಾಗಿದೆ ಎಂದು ಅವರು ತಿಳಿಸಿದರು.ಇಂದಿನ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ, ಡಾ: ಜಿ ಪರಮೇಶ್ವರ್, ಡಿ ಕೆ ಶಿವಕುಮಾರ್, ಮೊದಲಾದ ನಾಯಕರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ