ಹಾವೇರಿ
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ರಾಣೇಬೆನ್ನೂರು ನಗರದಲ್ಲಿ ಶುಕ್ರವಾರ ವಿವಿಧ 15 ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮತ್ತು ಹೋಲ್ಸೇಲ್ ಅಂಗಡಿ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿ ರೂ.2,400 ದಂಡ ವಸೂಲಿ ಮಾಡಲಾಗಿದೆ.ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ಆಹಾರ ಸುರಕ್ಷತಾ ಅಧಿಕಾರಿ ಎಸ್.ಸಿ.ಕೋರಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
