ಚಿತ್ರದುರ್ಗ
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ತನಿಖಾ ತಂಡವು ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ವಿವಿಧೆಡೆ ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ, ನಿಯಮಗಳ ಉಲ್ಲಂಘನೆ ಆರೋಪಕ್ಕಾಗಿ ಮೊಕದ್ದಮೆಗಳನ್ನು ದಾಖಲಿಸಿದೆ ಅಲ್ಲದೆ ದಂಡವನ್ನೂ ವಿಧಿಸಿದೆ.
ಜಿಲ್ಲಾ ಮಟ್ಟದ ತನಿಖಾ ತಂಡದಿಂದ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003 ರ ಅಡಿಯಲ್ಲಿ ಹೊಸದುರ್ಗ ಪಟ್ಟಣದಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ವಿವಿಧ ಅಂಗಡಿ, ಮಳಿಗೆಗಳಿಗೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಯಿತು. ಅಂಗಡಿಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಲ್ಲದೆ, ದಂಡವನ್ನೂ ವಿಧಿಸಿದೆ. ಹೊಸದುರ್ಗದಲ್ಲಿ 43 ಪ್ರಕರಣ ದಾಖಲಿಸಿದ್ದು, 3150 ರೂ. ದಂಡ ವಿಧಿಸಲಾಗಿದೆ. ತಂಬಾಕು ಉತ್ಪನ್ನಗಳ ಬಗ್ಗೆ ನಿಯವiದನ್ವಯ ಜಾಹೀರಾತು ಮೂಲಕ ಪ್ರಚಾರ ಮಾಡುವಂತಿಲ್ಲ. ಆದರೂ ಕೆಲವೆಡೆ ಅಳವಡಿಸಿದ್ದ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದೆ. ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ಮಾಡುವ ಪ್ರಕರಣಗಳನ್ನೂ ಕೂಡ ದಾಖಲಿಸಿ, ದಂಡ ವಿಧಿಸಿದೆ.
ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿ ಬಿ.ಎಂ. ಪ್ರಭುದೇವ್, ಮಧು, ಕಿರಣ್, ಬಿ.ಎಂ. ತಿಪ್ಪೇಸ್ವಾಮಿ ಪಾಲ್ಗೊಂಡಿದ್ದರು.