ಪ್ಲಾಟ್ ಫಾರಂ ಟಿಕೆಟ್ ಪಡೆಯಲು ಹೊಸ ದಾರಿ ಕಂಡು ಹಿಡಿದ ರೈಲ್ವೆ ಇಲಾಖೆ..!

ಬೆಂಗಳೂರು:

    ಕೆಎಸ್ಆರ್ ರೈಲ್ವೆ ಸ್ಟೇಷನ್ ನಲ್ಲಿ ಇನ್ನು ಮುಂದೆ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವುದಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. 

   ಕಿಯೋಸ್ಕ್ (ಯಂತ್ರಗಳ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆ) ಗಳನ್ನು ಭಾರತೀಯ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ (ಐಆರ್ ಎಸ್ ಡಿಸಿ)  ಒಂದು ಮತ್ತು 8 ನೇ ಪ್ಲಾಟ್ ಫಾರ್ಮ್ ಗಳಲ್ಲಿ ಅಳವಡಿಸಿದ್ದು, ಗ್ರಾಹಕರು ನೇರವಾಗಿ ಪ್ಲಾಟ್ ಫಾರ್ಮ್ ಟಿಕೆಟ್ ನ್ನು ಮಾನವ ಸಂಪರ್ಕವಿಲ್ಲದೇ ಕ್ಯುಆರ್ ಕೋಡ್ ಮೂಲಕ ಪಡೆದುಕೊಳ್ಳಬಹುದಾಗಿದೆ. 

    ರೈಲ್ವೆ ಇಲಾಖೆಯ ಆಧುನೀಕರಣದ ಭಾಗವಾಗಿ ಈ ಯಂತ್ರವನ್ನು ಅಳವಡಿಕೆ ಮಾಡಲಾಗಿದ್ದು ಕೋವಿಡ್-19 ಪರಿಸ್ಥಿತಿಯಲ್ಲಿ ಅಂತರ ಕಾಯ್ದುಕೊಳ್ಳುವುದಕ್ಕೂ ಈ ವಿಧಾನ ಸಹಕಾರಿಯಾಗಲಿದೆ. ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ಯಂತ್ರಗಳನ್ನು ಎರಡು ಪ್ರವೇಶ ದ್ವಾರಗಳಲ್ಲಿ ಸ್ಥಾಪಿಸಲಾಗಿದೆ, ಜನರು ತಮ್ಮ ವಾಹನಗಳನ್ನು ನಿಲ್ಲಿಸಿ ತಕ್ಷಣವೇ ಟಿಕೆಟ್ ಪಡೆಯುವುದಕ್ಕೆ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap