ಜುಲೈ 19ರಂದು ರೈತ ಹುತಾತ್ಮ ದಿನಾಚರಣೆ

ದಾವಣಗೆರೆ:

       ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಮತ್ತು ಹೊನ್ನಾಳಿ, ನ್ಯಾಮತಿ ತಾಲೂಕು ಘಟಕಗಳ ಆಶ್ರಯದಲ್ಲಿ ನಾಳೆ (ಜುಲೈ 19ರಂದು) ಬೆಳಿÀಗ್ಗೆ 10.30ಕ್ಕೆ ಹೊನ್ನಾಳ್ಳಿಯ ಶ್ರೀಚನ್ನಪ್ಪಸ್ವಾಮಿ ಸಮುದಾಯ ಭವನದಲ್ಲಿ

     ಪ್ರೊ.ಎಂ.ಡಿ.ನಂಜುಂಡಸ್ವಾಮಿ ಹಾಗೂ ರೈತ ಹೋರಾಟಗಾರ ಸುಂದರೇಶ್ ಸ್ಮರಣೋತ್ಸವ ಅವರ ಸ್ಮರಣೋತ್ಸವದ ಪ್ರಯುಕ್ತ ರೈತ ಹುತಾತ್ಮ ದಿನಾಚರಣೆ ಏರ್ಪಡಿಸಲಾಗಿದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ತಿಳಿಸಿದರು.ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊನ್ನಾಳಿ ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶಿವಮೊಗ್ಗದ ಬಸವಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಹನುಮಂತಪ್ಪ ಕುಂದೂರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ತಾಲೂಕು ಘಟಕದ ಅಧ್ಯಕ್ಷ ಎಂ.ಬಸವರಾಜಪ್ಪ ಪ್ರಾಸ್ತಾವಿಕ ಮಾತನಾಡಲಿದ್ದಾರೆ ಎಂದರು.

      ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್.ಆರ್, ಉಪ ವಿಭಾಗಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ತಹಶೀಲ್ದಾರುಗಳಾದ ತುಷಾರ ಬಿ. ಹೊಸೂರು, ರಶ್ಮಿ ಹಾಲೇಶ್, ಮುಖ್ಯ ಅತಿಥಿಗಳಾಗಿ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್, ಮುಖಂಡರಾದ ಕೆ.ಟಿ.ಗಂಗಾಧರ, ಅರುಣಕುಮಾರ್ ಕುರಡಿ, ನೂಲೇನೂರು ಶಂಕರಪ್ಪ, ತೇಜಸ್ವಿ ಪಾಟೀಲ್, ದರ್ಶನ್ ಪುಟ್ಟಣ್ಣಯ್ಯ, ರವಿಕಿರಣ ಪುನ್ನಚ್ಚ ಮತ್ತಿತರರು ಭಾಗವಹಿಸಲಿದ್ದಾರೆ. ರಾಜ್ಯ ಮೈತ್ರಿ ಸರ್ಕಾರದ ವೈಫಲ್ಯ ಖಂಡಿಸಿ ಜು. 21ರಂದು ಬೆಳಗಾವಿಯ ಗಾಂಧಿಭವನದಲ್ಲಿ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ 500 ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ವಾರದ ಗಡುವು:

      ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ರೈತರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಒಂದು ಸಭೆ ನಡೆಸದೇ ಕೇವಲ ಸರ್ಕಾರಿ ಕೆಲಸಗಳಿಗೆ ಸೀಮಿತವಾಗಿದ್ದಾರೆ. ಈ ಜಿಲ್ಲೆಗೆ ಅವರ ಅವಶ್ಯಕತೆ ಇದೆಯೇ ಎಂದು ಬಲ್ಲೂರು ರವಿಕುಮಾರ್ ಆರೋಪಿಸಿದರು.

      ರಾಜ್ಯದಲ್ಲಿ ಸರ್ಕಾರ ಸುಭದ್ರವಾಗಿಲ್ಲದ ಕಾರಣ ಅಧಿಕಾರಿಗಳು ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಬೆಳಗ್ಗೆ 10ರಿಂದ ರಾತ್ರಿ 8ರ ವರೆಗೆ ಸಭೆ ನಡೆಸಿದರೂ ರೈತರು, ಜನರ ಸಮಸ್ಯೆ ಬಗೆಹರಿದಿಲ್ಲ. ಇದನ್ನು ಪರಿಹರಿಸುವ ಮನಸು ಇದ್ದಂತಿಲ್ಲ. ಭೂಸ್ವಾಧೀನ ಪಡಿಸಿ ಕೊಂಡರೂ ಸಂಬಂಧಿತರಿಗೆ ಪರಿಹಾರ ಸಿಗುತ್ತಿಲ್ಲ. ಒಂದು ವಾರದೊಳಗೆ ಸಭೆ ಕರೆಯಬೇಕು. ನೀರಾವರಿ ಇಲಾಖೆ ಇಂಜಿನಿಯರ್ಗಳು 22 ಏತ ನೀರಾವರಿ ಕೆರೆಗಳಿಗೆ ನೀರು ತುಂಬಿಸುತ್ತಿಲ್ಲ. ವಾರದೊಳಗೆ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಈ ಬಗ್ಗೆ ರಾಜ್ಯಪಾಲರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗುವುದು ಎಂದರು.

      ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಆನಗೋಡು ಭೀಮಣ್ಣ, ಬಸವರಾಜ್, ಚಿಕ್ಕನಹಳ್ಳಿ ರೇವಣಸಿದ್ದಪ್ಪ, ಬುಳ್ಳಾಪುರ ಹನುಮಂತಪ್ಪ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link