ರೈತರ ಮೇಲಿರುವ ಪ್ರೆಕರಣ ವಾಪಸ್ಸಾತಿಗೆ ಮುಂದಾದ ಸರ್ಕಾರ : ಡಿ.ಸಿ.ತಮ್ಮಣ್ಣ

ಬೆಂಗಳೂರು

     ಕಾವೇರಿ ಜಲವಿವಾದ ಸಂದರ್ಭದಲ್ಲಿ ರೈತ ಸಮುದಾಯದವರು ನಡೆಸಿರುವ ಪ್ರತಿಭಟನೆಯ ಪ್ರಕರಣಗಳನ್ನು ವಾಪಸ್ ಪಡೆಯಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.

     ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ರೈತರ ಮೇಲೆ ನೂರಾರು ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕರ ಆಸ್ತಿ-ಪಾಸ್ತಿ ಹಾನಿ ಮಾಡಿರುವ ಪ್ರಕರಣಗಳ ಹೊರತುಪಡಿಸಿ ಶೇ.90 ರಷ್ಟು ಕೇಸುಗಳನ್ನು ಹಿಂದಕ್ಕೆ ಪಡೆಯಲು ಸಂಪುಟಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದರು

      ಹಲವಾರು ವರ್ಷಗಳಿಂದ ರೈತರು ನ್ಯಾಯಾಲಯಗಳಿಗೆ ಎಡತಾಕುತ್ತಿದ್ದಾರೆ. ಅವರ ಕಷ್ಟವನ್ನು ಅರ್ಥೈಸಿಕೊಂಡಿರುವ ಸರ್ಕಾರ, ಸಾರ್ವಜನಿಕ ಹಿತದೃಷ್ಟಿಯಿಂದ ಹಾಕಿರುವ ಬಹುತೇಕ ಮೊಕದ್ದಮೆಗಳನ್ನು ವಾಪಸ್ ಪಡೆಯಲು ಶಿಫಾರಸ್ಸು ಮಾಡಿರುವುದಾಗಿ ಅವರು ಸ್ಪಷ್ಪಡಿಸಿದರು.

      ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ರಾಜಕೀಯ ವಿಚಾರವನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಸೀಟು ಹಂಚಿಕೆ ವಿಚಾರ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಿರುವುದಾಗಿ ಅವರು ಸ್ಪಷ್ಟಪಡಿಸಿದರು.

     ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ರಾಜಕೀಯ ಬೇಕು. ಆಗಿದ್ದರೆ ಮಾತ್ರ ಸರ್ಕಾರ ಸುಗಮವಾಗಿ ನಡೆಯಲು ಸಾಧ್ಯ. ಹೀಗಾಗಿ, ನಾವು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap