ಚಿತ್ರದುರ್ಗ:
ಕೃಷಿ ತಂತ್ರಜ್ಞರ ಸಂಸ್ಥೆಯಿಂದ ಪ್ರತಿ ವರ್ಷವೂ ರೈತ ಮಕ್ಕಳಿಗೆ ನೀಡುವ ತರಬೇತಿ ಪ್ರಾಯೋಗಿಕ ಪರೀಕ್ಷೆಗೆ ಅನುಕೂಲವಾಗಲಿದೆ ಎಂದು ಐ.ಎ.ಟಿ.ಅಧ್ಯಕ್ಷ ಜಿ.ಚಂದ್ರಪ್ಪ ತಿಳಿಸಿದರು.
ಕರ್ನಾಟಕ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ವಿಶ್ವವಿದ್ಯಾನಿಲಯಗಳಲ್ಲಿ ಇದೇ ತಿಂಗಳು ಕೃಷಿಕರ ಮಕ್ಕಳಿಗಾಗಿ ನಡೆಯುವ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿ ಎನ್ನುವ ಉದ್ದೇಶದಿಂದ ಕಳೆದ ಐದು ವರ್ಷಗಳಿಂದಲೂ ಎ.ಪಿ.ಎಂ.ಸಿ.ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಿಂದ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಎರಡು ದಿನಗಳ ತರಬೇತಿ ನೀಡಲಾಗುವುದು ರೈತ ಮಕ್ಕಳು ಇದರ ಪ್ರಯೋಜನ ಪಡೆದುಕೊಂಡು ಜೀವನದಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳುವಂತೆ ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶಿವಮೊಗ್ಗ ಪಶುವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಿ.ಟಿ.ಗೋಪಾಲ್ ಪ್ರಾತ್ಯಕ್ಷಿಕೆ ಮೂಲಕ ಕೃಷಿ, ತೋಟಗಾರಿಕೆ, ಪಶುಸಂಗೋಪನಾ ಇಲಾಖೆ ವಿಶ್ವವಿದ್ಯಾನಿಲಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಎಷ್ಟು ಕಾಲೇಜುಗಳು ಎಲ್ಲೆಲ್ಲಿದೆ. ಎಷ್ಟು ಸೀಟುಗಳಿವೆ. ಯಾವ ರೀತಿ ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುವ ಕುರಿತು ತರಬೇತಿಯಲ್ಲಿ ಭಾಗವಹಿಸಿದ್ದ ಕೃಷಿಕರ ಮಕ್ಕಳಿಗೆ ಮಾಹಿತಿ ನೀಡಿದರು.
ಕೃಷಿ, ತೋಟಗಾರಿಕೆ, ಪಶುಸಂಗೋಪನಾ ಇಲಾಖೆಯಲ್ಲಿ 2700 ಸೀಟುಗಳಿದ್ದು, ರೈತರು ಹಾಗೂ ರೈತ ಕುಟುಂಬದ ಹಿನ್ನೆಲೆಯಿಂದ ಬಂದ ಮಕ್ಕಳಿಗೆ ಶೇ.40 ರಷ್ಟು ಸೀಟನ್ನು ಕಾಯ್ದಿರಿಸಲಾಗಿದೆ. ಕೆಲವು ಫೋಟೋಗ್ರಫಿ, ಸಿ.ಇ.ಟಿ. ಪರೀಕ್ಷೆಯ ನಿಯಮಗಳೇನು ಹಾಗೂ ಪ್ರಾಯೋಗಿಕ ಪರೀಕ್ಷೆಗೆ ಯಾವ ರೀತಿ ತಯಾರಿಯಾಗಬೇಕು ಎನ್ನುವ ಬಗ್ಗೆ ರೈತ ಮಕ್ಕಳಿಗೆ ತಿಳಿಸಿಕೊಟ್ಟರು.
ಕೃಷಿ ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿ ಎ.ತಿಪ್ಪೇಸ್ವಾಮಿ, ಖಜಾಂಚಿ ಬಿ.ಟಿ.ಹನುಮಂತರೆಡ್ಡಿ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಜೆ.ತಿಪ್ಪೇಸ್ವಾಮಿ, ಆರ್.ಓ.ತಿಪ್ಪೇಸ್ವಾಮಿ ವೇದಿಕೆಯಲ್ಲಿದ್ದರು.