ರಾಜೀವಗಾಂಧಿ ಹಾಗೂ ದೇವರಾಜ ಅರಸು ಅವರ ಚಿಂತನೆಗಳು ಅಭಿವೃದ್ಧಿಗೆ ಪೂರಕ : ಡಿಸಿ

ಹಾವೇರಿ
 
   ಭಾರತದ ಮಾಜಿ ಪ್ರಧಾನಿ ಆಧುನಿಕ ತಂತ್ರಜ್ಞಾನ ಚಿಂತಕರಾದ ರಾಜೀವಗಾಂಧಿ ಹಾಗೂ ಕರ್ನಾಟಕದ ಅಭಿವೃದ್ಧಿ ಹರಿಕಾರರಾದ ಡಿ.ದೇವರಾಜ ಅರಸು ಅವರ ಚಿಂತನೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಹೇಳಿದರು.
   ಜಿಲ್ಲಾಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರ 75 ನೇ ಜನ್ಮದಿನ ಅಂಗವಾಗಿ ಹಮ್ಮಿಕೊಳ್ಳಲಾದ ಸದ್ಭಾವನಾ ದಿನಾಚರಣೆ ಹಾಗೂ ಡಿ.ದೇವರಾಜ ಅವರು 104ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪನಮನ ಅರ್ಪಿಸಿ ಅವರು ಮಾತನಾಡಿದರು.
   ಭಾರತ ದೇಶ ಬಹುಸಂಸ್ಕøತಿಯಲ್ಲಿ ಏಕತೆಯಿಂದ ಬಾಳುತ್ತಿರುವ ಜಗತ್ತಿನ ಅತ್ಯಂತ ಶ್ರೇಷ್ಠ ದೇಶವಾಗಿದೆ. ಬಹುಸಂಸ್ಕøತಿಯ ನಾಡಲ್ಲಿ ಯಾವುದೇ ಸಂಸ್ಕøತಿ ಮೇಲು, ಯಾವುದೇ ಸಂಸ್ಕøತಿ ಕೀಳು ಎಂಬ ಬೇಧಭಾವವಿಲ್ಲದೆ ವಿವಿಧತೆಯಲ್ಲಿ ಏಕತೆಯಿಂದ ದೇಶದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸುತ್ತಿರುವ ಸದ್ಭಾವನೆಯ ಸಂಸ್ಕøತಿಯ ಶ್ರೇಷ್ಠ ದೇಶವಾಗಿದೆ ಎಂದು  ಅವರು ಹೇಳಿದರು.
  ಭಾರತದ ಮಾಜಿ ಪ್ರಧಾನಿ ರಾಜೀವಗಾಂಧಿ ಅವರು ಆಧುನಿಕ ತಳಹದಿಯ ಮೇಲೆ ದೇಶದ ಅಭಿವೃದ್ಧಿಯ ಕನಸು ಕಂಡವರು. ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸಿದವರು. ಆಧುನಿಕ ತಂತ್ರಜ್ಞಾನ ಸ್ಥಳೀಯ ಉದ್ಯೋಗವನ್ನು ಕಸಿಯುತ್ತಿದೆ ಎಂಬ ಮನೋಭಾವವನ್ನು ದೂರಮಾಡಿ ದೂರದೃಷ್ಟಿತ್ವದಿಂದ ದೇಶದ ಆರ್ಥಿಕ, ಸಾಮಾಜಿಕ ಶ್ರಮಿಸಿದರು ಎಂದರು.
 
    ಕರ್ನಾಟಕ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರು ಸಾಮಜಿಕ ಅಭಿವೃದ್ಧಿಗೆ ಶ್ರಮಿಸಿದವರು. ಸಮಾಜದ ಏಳ್ಗೆಗಾಗಿ, ಸಮಾಜದ ಸಮಾನತೆಗಾಗಿ ಹಲವು ಸಾಮಾಜಿಕ ಹಾಗೂ ಆರ್ಥಿಕ ಸುಧಾರಣೆಯನ್ನು ತಂದವರು. ಈ ಎರಡು ಮಹಾ ಪುರುಷರ ಒಳ್ಳೆಯ ವಿಚಾರಗಳು ನಮ್ಮ ಅಭಿವೃದ್ಧಿಗೆ ಸಹಕಾರಿಯಾಗಿವೆ ಎಂದು ಹೇಳಿದರು.
ಪ್ರತಿಜ್ಞಾವಿಧಿ:
 
   ಅತಿವೃಷ್ಠಿ, ನೆರೆಯ ಹಿನ್ನೆಲೆಯಲ್ಲಿ ಸರಳವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸದ್ಭಾವನಾ ಪ್ರತಿಜ್ಞೆ ಬೋಧಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಕೆ.ಲೀಲಾವತಿ, ಪ್ರೋಬೇಷನರಿ ಐ.ಎ.ಎಸ್. ಅಧಿಕಾರಿ ನೇಹಾ ಜೈನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ  ಮಲ್ಲಿಕಾರ್ಜುನ ಬಾಲದಂಡಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.ಡಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮದ ಅನುದಾನವನ್ನು ನೆರೆ ಸಂತ್ರಸ್ಥರಿಗೆ ಬಳಸಿಕೊಳ್ಳಲು ಸಮಾರಂಭದಲ್ಲಿ ಘೋಷಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link