ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ

ತುಮಕೂರು
     ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.  ಕಾನೂನು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಅಂದು ಬೆಳಿಗ್ಗೆ 9ಗಂಟೆಗೆ  ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ.   
      ಧ್ವಜಾರೋಹಣದ ನಂತರ ಸಚಿವರಿಂದ ರಾಜ್ಯೋತ್ಸವ ಸಂದೇಶ, ಶಾಲಾ ಮಕ್ಕಳಿಂದ ಸಾಮೂಹಿಕ ಕವಾಯತು ಹಾಗೂ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಪಾಲಿಕೆ ಮೇಯರ್ ಲಲಿತ ರವೀಶ್, ಸಂಸದ ಜಿ.ಎಸ್.ಬಸವರಾಜು, ಜಿಲ್ಲೆಯ ವಿವಿಧ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಗಣ್ಯರು, ಶಾಲಾ ಮಕ್ಕಳು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. 
 
    ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಂದು ಸಂಜೆ 4 ಗಂಟೆಗೆ ನಗರದ ಗಾಜಿನಮನೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.  
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link