ಬೆಂಗಳೂರು
ವೇಗವಾಗಿ ಹೋಗುತ್ತಿದ್ದ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಉಂಟಾದ ಅಪಘಾತದಲ್ಲಿ ಗಾಯಗೊಂಡವರನ್ನು ರಕ್ಷಿಸಲು ಹೋದಾಗ ಪತ್ತೆಯಾದ ರಕ್ತಚಂದನ ಮರದ ತುಂಡುಗಳ ಸಾಗಾಟದ ಆರೋಪಿಗಳಿಗಾಗಿ ಹೊಸಕೋಟೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.
ಕಳೆದ ಭಾನುವಾರ ರಾತ್ರಿ ಹೊಸಕೋಟೆಯ ಜಡಿಗೇನಹಳ್ಳಿ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದಾಗ ಕಾರಿನಲ್ಲಿದ್ದವರ ರಕ್ಷಣೆಗೆ ತೆರಳಿದ್ದವರಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರಕ್ತಚಂದನ ತುಂಡುಗಳು ಕಂಡುಬಂದಿವೆ.
ಕಾರು ರಸ್ತೆ ಬದಿಯಲ್ಲಿದ್ದ ಹಳ್ಳದಲ್ಲಿ ಬಿದ್ದಾಗ ಗ್ರಾಮಸ್ಥರು ಕಾರಿನಲ್ಲಿದ್ದವರನ್ನು ರಕ್ಷಿಸಲು ಮುಂದಾಗುವಷ್ಟರಲ್ಲಾಗಲೇ ಕಾರಿನಲ್ಲಿದ್ದವರು ಅಲ್ಲಿಂದ ಪರಾರಿಯಾಗಿದ್ದು ಕಾರಿನಲ್ಲಿ ಸುಮಾರು 15 ಲಕ್ಷ ರೂಪಾಯಿ ಬೆಲೆಬಾಳುವ 12 ರಕ್ತ ಚಂದನದ ತುಂಡುಗಳು ಕಂಡುಬಂದಿವೆ
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಹೊಸಕೋಟೆ ಪೊಲೀಸರು ರಕ್ತ ಚಂದನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ರಕ್ತಚಂದನ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.ನಕಲಿ ನಂಬರ್ ಪ್ಲೇಟ್ ಬಳಸಿ ಕಾರಿನಲ್ಲಿ ರಕ್ತಚಂದನ ಸಾಗಿಸುತ್ತಿರುವುದು ತನಿಖೆಯಲ್ಲಿ ಕಂಡುಬಂದಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
