ಬೆಂಗಳೂರು
ರಾಮಚಂದ್ರಾಪುರ ಮಠದ ದುರಾಡಳಿತಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮೇಲ್ಮನವಿ ಮತ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 16ರಂದು ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.ರಾಮಚಂದ್ರಾಪುರ ಮಠದ ದುರಾಡಳಿತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ಸುಭಾಷ್ ಸಿ.ಖುಂಟಿ ಅವರ ತನಿಖೆಗೆ ವಹಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ದೂರುದಾರ ಎದುರ್ಕುಳ ಈಶ್ವರ ಭಟ್ ಮತ್ತು ಎ.ಕೆ.ಜಯಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.ಈ ಮೇಲ್ಮನವಿಯನ್ನು ಸೋಮವಾರ ಮುಖ್ಯ ನ್ಯಾಯಮೂರ್ತಿಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
