ಬೆಂಗಳೂರು
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯಕೆ.ಸಿ.ರಾಮಮೂರ್ತಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ನವದೆಹಲಿಯಲ್ಲಿಂದುಉಪರಾಷ್ಟ್ರಪತಿ ಹಾಗೂ ರಾಜ್ಯಸಭಾಕ್ಷರಾದ ವೆಂಕಯ್ಯ ನಾಯ್ಡುಅವರನ್ನು ಭೇಟಿಯಾಗಿರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಮೂಲಗಳ ಪ್ರಕಾರಅವರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಹೇಳಾಗುತ್ತಿದ್ದು, ಈ ಕಾರಣಕ್ಕಾಗಿಯೇ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಎಂದು ತಿಳಿದುಬಂದಿದೆ. ನಾನು ಕೆಲ ಕಾರಣಗಳಿಗಾಗಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದೆ. ಅದಕ್ಕೂ ನನ್ನರಾಜೀನಾಮೆಗೂ ಸಂಬಂಧವಿಲ್ಲ. ಮುಂದಿನ ರಾಜಕೀಯ ನಿರ್ಧಾರಗಳ ಬಗ್ಗೆ ಎರಡು-ಮೂರು ದಿನಗಳೊಳಗಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ಬಿಜೆಪಿ ಸೇರುವಕುರಿತು ಸದ್ಯಕ್ಕೆ ನಿರ್ಧಾರತೆಗೆದುಕೊಂಡಿಲ್ಲ. ಶೀಘ್ರವೇ ಮುಂದಿನ ನಡೆಯನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಬೆಂಬಲಿತಅಭ್ಯರ್ಥಿಯಾಗಿರಾಜ್ಯಸಭೆಗೆಆಯ್ಕೆಯಾಗಿದ್ದ ಕೆ.ಸಿ.ರಾಮಮೂರ್ತಿ ದಿಢೀರನೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ.
ನಾನು ಕೆಲವು ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆಎಂದು ಸ್ಪಷ್ಟಪಡಿಸಿದರು. ನನ್ನನ್ನುರಾಜ್ಯಸಭಾ ಸ್ಥಾನಕ್ಕೆ ಆಯ್ಕೆ ಮಾಡಲು ಸಹಕಾರ ನೀಡಿದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ , ಮುಖಂಡರಾದ ಡಾ.ಜಿ.ಪರಮೇಶ್ವರ್ ಸೇರಿದಂತೆ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ.
ಪಕ್ಷದ ವಿಚಾರದಲ್ಲಾಗಲಿ ಅಥವಾ ನಾಯಕರ ವಿಚಾರದಲ್ಲಾಗಲಿ ಟೀಕೆ ಮಾಡುವಂತದ್ದು ಏನೂ ಇಲ್ಲ.ಅಭಿವೃದ್ದಿಜೊತೆ ಕೈ ಜೋಡಿಸಬೇಕು ಎಂಬ ದೃಷ್ಟಿಯಿಂದರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಎಂದರು. ನನ ರಾಜೀನಾಮೆಯಿಂದರಾಜ್ಯಸಭೆಯಲ್ಲಿ ಕೆಲವು ಮಸೂದೆಗಳನ್ನು ಪಾಸ್ ಮಾಡಿಕೊಳ್ಳಲು ಬಿಜೆಪಿಗೆ ಅನುಕೂಲವಾಗುತ್ತದೆಎಂಬುದು ಸರಿಯಲ್ಲ.
ನನ್ನಿಂದಾಗಿ ಬಿಜೆಪಿಗೆ ಅನುಕೂಲಗಳಾಗುತ್ತವೆ ಎಂಬುದನ್ನುಒಪ್ಪುವುದಿಲ್ಲ ಎಂದು ಹೇಳಿದರು. ಮೂಲಗಳ ಪ್ರಕಾರ ರಾಜೀನಾಮೆ ನೀಡುವ ಮುನ್ನ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಮಾತುಕತೆ ನಡೆಸಿಯೇ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
