ಮಠಕ್ಕೂ ನನಗೂ ಅವಿನಾಭಾವ ಸಂಬಂಧ

ತುಮಕೂರು

     ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್‍ಬಾಬು ಬುಧವಾರ ಸಂಜೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಸಿದ್ದಲಿಂಗಸ್ವಾಮೀಜಿ ಅವರ ಆಶೀರ್ವಾದ ಪಡೆದರು.

    ಡಾ. ಶ್ರೀಶಿವಕುಮಾರಸ್ವಾಮೀಜಿಗಳ ಗದ್ದುಗೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ನಂತರ, ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ರಮೇಶ್‍ಬಾಬು, ಸಿದ್ದಗಂಗಾ ಮಠಕ್ಕೂ ನನಗೂ ಅವಿನಾಭಾವ ಸಂಬಂಧವಿದೆ. ಅದರಲ್ಲಿಯೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನವನಾದ ನನಗೆ ಸಿದ್ದಗಂಗಾ ಮಠದ ಅನುಗ್ರಹ ಸದಾ ಇರುತ್ತದೆ. ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿ ಹಾಗೂ ಶ್ರೀಸಿದ್ದಲಿಂಗಸ್ವಾಮೀಜಿ ಇಬ್ಬರ ಅಶೀರ್ವಾದವೂ ನನ್ನ ಮೇಲಿದೆ. ನನ್ನ ರಾಜಕೀಯ ಜೀವನದ ಬೆಳವಣಿಗೆಗೆ ಇದು ಕಾರಣ ಎಂದರು.

    ಕಳೆದ ಸಾಲಿನಲ್ಲಿ ನನಗೆ ಸಿಕ್ಕ ಅಲ್ಪ ಅವಧಿಯಲ್ಲಿಯೇ ಶಿಕ್ಷಕರು ಮತ್ತು ಪದವಿಧರರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸಿದ್ದೇನೆ. ಅಲ್ಲದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದ 6ನೇ ವೇತನ ಆಯೋಗದ ಶಿಫಾರಸ್ಸುಗಳ ಸಂಪೂರ್ಣ ಜಾರಿ ಹಾಗೂ ಹಲವಾರು ಶಿಕ್ಷಕರ ಪರ ಕೆಲಸಗಳು ನನಗೆ ಶ್ರೀರಕ್ಷೆಯಾಗಿವೆ. ಮುಂದಿನ ದಿನಗಳಲ್ಲಿಯೂ ಶಿಕ್ಷಕರು ಮತ್ತು ಪದವೀವಿಧರರ ಪರವಾಗಿ ಕೆಲಸ ಮಾಡಲಿದ್ದೇನೆ.

    ಇದರ ಜೊತೆಗೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಹಕಾರಿ ಧುರೀಣರಾದ ಕೆ.ಎನ್.ರಾಜಣ್ಣ, ಟಿ.ಬಿ.ಜಯಚಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರುಗಳು ಸಹ ನನಗೆ ಬೆಂಬಲವಾಗಿ ನಿಂತಿದ್ದಾರೆ. ಆದ್ದರಿಂದ ಪದವೀಧರರು ನನಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡುವುದಾಗಿ ರಮೇಶ್‍ಬಾಬು ತಿಳಿಸಿದರು.ಈ ವೇಳೆ ಮುಖಂಡರಾದ ಭೈರಹನುಮಯ್ಯ ಮತ್ತು ಅಶೋಕ್ ಜಿ.ಎಂ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap