ರಮೇಶ್ ಜಾರಕೀಹೋಳಿ ಯಾರನ್ನೂ ಭೇಟಿಯಾಗಿಲ್ಲ ಸತೀಶ್ ಜಾರಕೀಹೋಳಿ …!!!

ಬೆಂಗಳೂರು

      ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ರಾಷ್ಟ್ರಿಯ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ ಎನ್ನುವುದು ಕೇವಲ ಊಹಾಪೋಹವಾಗಿದ್ದು, ಸಹೋದರ ರಮೇಶ್ ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದು ಅರಣ್ಯ ಖಾತೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

      ವಿಧಾನಸೌಧದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರಮೇಶ್ ಜಾರಕಿಹೊಳಿ ಇನ್ನೂ ಸಹ ತಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರೊಂದಿಗೆ ಮಾತನಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರು ಹೇಳಿದ್ದು, ರಮೇಶ್ ಸಿಕ್ಕಕೂಡಲೇ ಅವರೊಂದಿಗೆ ಮಾತನಾಡುತ್ತೇನೆ ಎಂದರು.

      ಅರಣ್ಯ ಖಾತೆಯಲ್ಲಿ ತಮ್ಮ ಗಮನಕ್ಕೆ ಬಾರದಂತೆ ಯಾವುದೇ ವರ್ಗಾವಣೆಗಳು ನಡೆದಿಲ್ಲ. ತಾವು ಅಧಿಕಾರಕ್ಕೆ ಬರುವ ಮೊದಲಾದ ವರ್ಗಾವಣೆಗಳ ಬಗ್ಗೆ ಗೊತ್ತಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap