ಬಳ್ಳಾರಿ
ಮುಖ್ಯಮಂತ್ರಿ ಕುಮಾರಸ್ವಾಮಿ ಆಡಳಿತದಿಂದ ಬೇಸತ್ತು ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅವರೀಗ ರಾಜೀನಾಮೆ ನೀಡಿದರೆ ನಮ್ಮ ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆಡಳಿತಕ್ಕೆ ಮೈತ್ರಿ ಪಕ್ಷದಲ್ಲಿಯೇ ಅಸಮಾಧಾನವಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಮುಂದುವರಿಯುವುದು ಕಷ್ಟಸಾಧ್ಯವಿದೆ. ಕುಮಾರಸ್ವಾಮಿಯೇ ಬೇಸತ್ತು ಸಿಎಂ ಸ್ಥಾನ ಬೇಡವೆಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಅಂತಹ ಪರಿಸ್ಥಿತಿ ಬಂದಾಗ ಮತ್ತೊಮ್ಮೆ ರಾಜ್ಯದಲ್ಲಿ ಚುನಾವಣೆ ನಡೆಯಬಾರದು. ಈ ಕಾರಣಕ್ಕಾಗಿ ಬಹುಮತ ಪಡೆದಿರುವ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಕೊಡಿ ಎಂದು ರಾಜ್ಯಪಾಲರನ್ನು ವಿನಂತಿಸುತ್ತೇವೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
