ಚಿತ್ರದುರ್ಗ
ತೆಲಂಗಾಣದಲ್ಲಿ ಪಶುವೈದ್ಯೆ ಪ್ರಿಯಾಂಕಾರೆಡ್ಡಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಅಮಾನುಷವಾಗಿ ಸುಟ್ಟು ಹಾಕಿರುವ ಪಾತಕಿಗಳನ್ನು ಗಲ್ಲಿಗೇರಿಸುವಂತೆ ಅಖಿಲ ಕರ್ನಾಟಕ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮಿತಿಯಿಂದ ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದಾಗಲೆಲ್ಲಾ ದೇಶದಾದ್ಯಂತ ಉಗ್ರ ಪ್ರತಿಭಟನೆಯಾಗುವುದನ್ನು ಬಿಟ್ಟರೆ ಇದರಿಂದ ಕಾಮುಕರಿಗೆ ಕಠಿಣ ಶಿಕ್ಷೆಯೇನು ಆಗುತ್ತಿಲ್ಲ. ಪಶುವೈದ್ಯೆ ಪ್ರಿಯಾಂಕಾರೆಡ್ಡಿ ಅತ್ಯಾಚಾರ ಮತ್ತು ಹತ್ಯೆ ಇಡೀ ದೇಶವನ್ನೇ ತಲ್ಲಣಿಸಿದೆ. ಪ್ರತಿ ಐದು ನಿಮಿಷಕ್ಕೊಮ್ಮೆ ದೇಶದಲ್ಲಿ ಮಹಿಳೆಯರು ಹಾಗೂ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವಾಗುತ್ತಿದ್ದರೂ ಶಿಕ್ಷೆ ವಿಧಿಸುವಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ನೋಡಿದರೆ ನಿಜಕ್ಕೂ ಮಹಿಳೆಯರಿಗೆ ರಕ್ಷಣೆಯಿಲ್ಲದಂತಾಗಿದೆ ಎನ್ನುವುದು ಗೊತ್ತಾಗುತ್ತದೆ.
ದೆಹಲಿಯಲ್ಲಿ ನಿರ್ಭಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ವರ್ಮ ಕಮಿಟಿ ನೀಡಿರುವ ಮಹಿಳಾ ಸುರಕ್ಷತೆಯ ಶಿಫಾರಸ್ಸುಗಳನ್ನು ಒಳಗೊಂಡಂತಹ ಕಠಿಣ ಕ್ರಮ ಜಾರಿಗೊಳಿಸಿ ಕಾಮುಕರಿಗೆ ಉಗ್ರ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.ಅಖಿಲ ಕರ್ನಾಟಕ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮಿತಿ ಜಿಲ್ಲಾಧ್ಯಕ್ಷ ಕೆ.ಜಿ.ಅನಂತಮೂರ್ತಿ ನಾಯ್ಕ. ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ತುಳಸಿ ರಮೇಶ್, ಕಿರಣ್, ಶ್ಯಾಮ್, ಜಗದೀಶ್, ವಿರುಪಾಕ್ಷಪ್ಪ ಯಾದವ್, ಓಬಳೇಶ್, ಗಣೇಶ್ ನಾಯ್ಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ