ಬೆಂಗಳೂರು
ವೇಗವಾಗಿ ಬಂದ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಕಳೆಗೆ ಬಿದ್ದ ಪತ್ನಿ ಮೇಲೆ ಮತ್ತೊಂದು ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟರೆ ಪತಿ ಗಾಯಗೊಂಡಿರುವ ದಾರುಣ ಘಟನೆ ನಗರದ ಹೊರವಲಯದ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ಹೊಸೂರು ಹೆದ್ದಾರಿಯ ಚಂದಾಪುರ ಮೇಲುಸೇತುವೆ ರಸ್ತೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನೆರಳೂರಿನ ರೇಣುಕಾ (25) ಎಂದು ಗುರುತಿಸಲಾಗಿದೆ.ಗಾಯಗೊಂಡಿರುವ ರೇಣುಕಾ ಅವರ ಪತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.ಹೊಸೂರಿನಿಂದ ಬೆಂಗಳೂರಿಗೆ ಹೊರಟಿದ್ದ ತಮಿಳುನಾಡಿಗೆ ಸೇರಿದ ಬಸ್ ಮಾರ್ಗಮಧ್ಯೆ ಚಂದಾಪುರ ಮೇಲುಸೇತುವೆ ರಸ್ತೆಯಲ್ಲಿ ಮುಂದೆ ಹೋಗುತ್ತಿದ್ದ ಬೈಕ್ಗೆಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದು ಅವರ ಮೇಲೆ ಮತ್ತೊಂದು ಬಸ್ ಹರಿದ ಪರಿಣಾಮ ಮಹಿಳೆಯ ತಲೆ ಛಿದ್ರಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ..
ಮೃತ ರೇಣುಕಾ ಪತಿಯೊಂದಿಗೆ ನೆರಳೂರಿನಲ್ಲಿ ವಾಸವಿದ್ದರು. ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಮೂಲದವರಾದ ದಂಪತಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರು ಮಕ್ಕಳನ್ನು ಅಗಲಿದ ತಾಯಿ ರೇಣುಕಾಳ ಸಂಬಂಧಿಕರ ಗೋಳು ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸೂರ್ಯ ಸಿಟಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
