ಹೊನ್ನಾಳಿ:
ಪಟ್ಟಣದ ಅಕ್ಕಸಾಲಿಗರ ಬೀದಿಯ ರಸ್ತೆಯಲ್ಲಿ ಬೃಹತ್ ಗಾತ್ರದ ಕಲ್ಲುಗಳಿದ್ದು, ಈ ಕಾರಣದಿಂದ ಈ ಮಾರ್ಗದಲ್ಲಿ ಓಡಾಡುವುದೇ ದುಸ್ತರವಾಗಿದೆ. ತಿರುವಿನ ರಸ್ತೆ ಇದಾಗಿದ್ದು, ಏಕಾಏಕಿ ವೇಗದಿಂದ ಬರುವ ವಾಹನಗಳು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ. ಮೊದಲೇ ರಸ್ತೆ ಕಿರಿದಾಗಿದೆ. ಅದರ ಮಧ್ಯೆ ರಸ್ತೆಯ ಬಹುಭಾಗವನ್ನು ಬೃಹತ್ ಗಾತ್ರದ ಕಲ್ಲುಗಳು ಅತಿಕ್ರಮಿಸಿಕೊಂಡಿರುವುದರಿಂದ ಈ ಭಾಗದಲ್ಲಿ ಜನ-ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.
ತಕ್ಷಣ ಸಂಬಂಧಪಟ್ಟವರು ಇತ್ತ ಗಮನಹರಿಸಿ ಸೂಕ್ತ ಕ್ರಮ ಜರುಗಿಸುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಈ ಭಾಗದ ನೊಂದ ನಿವಾಸಿಗಳು ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ