ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ಹಾವೇರಿ

         ಕೇವಲ ಪ್ರಚಾರಕ್ಕೆ ಮಾರುಹೋಗಿ ವಸ್ತುಗಳನ್ನು ಖರೀದಿಸದೇ ಅವುಗಳ ಗುಣಮಟ್ಟದ ಬಗ್ಗೆ ಜಾಗೃತವಹಿಸುವುದು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ಅವರು ಗ್ರಾಹಕರಿಗೆ ಸಲಹೆ ನೀಡಿದರು.

         ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ, ಚೈತನ್ಯ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಹಾವೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣ ಆಯೋಜಿಸಲಾದ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2018” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

        ಸಾರ್ವಜನಿಕರು ಮಾರುಕಟ್ಟೆಯಲ್ಲಿ ವಸ್ತುಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವುದು ಅತ್ಯವಶ್ಯವಾಗಿದೆ. ಸಾರ್ವಜನಿಕರು ಗ್ರಾಹಕರ ಹಕ್ಕುಗಳ ಮಾಹಿತಿ ಪಡೆಯುವುದು ಅತ್ಯಗತ್ಯವಾಗಿದೆ. ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದರೆ ಮಾರುಕಟ್ಟೆಯಲ್ಲಿ ವಸ್ತುಗಳ ಖರೀದಿ, ಕಲಬೆರಿಕೆ ಬಗೆಗೆ ಎಚ್ಚರಹಿಸಲು ಸಾಧ್ಯ ಎಂದು ಹೇಳಿದರು.

        ಅತೀಯಾದ ಲಾಭದ ಆಸೆಯಿಂದ ವ್ಯಾಪಾರಸ್ಥರು ಹಾಗೂ ಉದ್ಯಮಿದಾರರು ಗ್ರಾಹಕರಿಗೆ ಒಂದಿಲ್ಲ ಒಂದು ರೀತಿ ವಂಚಿಸುತ್ತಿರುವುದು ಕಂಡುಬರುತ್ತದೆ. ಆಹಾರ ಪದಾರ್ಥಗಳಲ್ಲಿ ಕಲಬೇರಿಕೆ, ಗುಣಮಟ್ಟದ ವಸ್ತುಗಳ ಹೆಸರಿನಲ್ಲಿ ಮೋಸದಂತಹ ಪ್ರಕರಣಗಳು ನಿತ್ಯವೂ ನಡೆಯುತ್ತಿದೆ. ಇದಕ್ಕೆ ಪರಿಹಾರ ಗ್ರಾಹಕ ಶಿಕ್ಷಣ ಹಾಗೂ ಜಾಗೃತಿಯಿಂದ ಮಾತ್ರ ವಂಚನೆಯನ್ನು ಸಮರ್ಥವಾಗಿ ಎದುರಿಸಬಹುದು ಎಂದು ಹೇಳಿದರು.

          ಗ್ರಾಹಕರ ಹಿತರಕ್ಷಣಾ ಕಾಯ್ದೆ-1986 ಜಾರಿಗೆ ಬಂದಿದೆ. ಈ ಕಾಯ್ದೆಯಿಂದ “ಮಾರುವವನು ಎಚ್ಚರ” ಎಂದು ಧ್ಯೇಯದೊಂದಿಗೆ ಗ್ರಾಹಕರನ್ನು ರಕ್ಷಿಸಲು ಈ ಕಾಯ್ದೆ ಒಂದು ಅಮೂಲ್ಯವಾದ ಕವಚವಾಗಿದೆ ಎಂದು ಹೇಳಿದರು.

        ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುನಂದಾ ದುರಗೇಶ ಅವರು ಮಾತನಾಡಿ, ಜಗತ್ತಿನಲ್ಲಿ ಹುಟ್ಟಿದ ಮಗುವಿನಿಂದ ಸಾಯುವ ವ್ಯಕ್ತಿಯವರಿಗೆ ಎಲ್ಲರೂ ಗ್ರಾಹಕರೇ. ಸಮಾಜದಲ್ಲಿ ಒಬ್ಬರನ್ನೊಬ್ಬರು ಅಲಂಬಿಸಿರುವುದರಿಂದ ದಿನನಿತ್ಯದ ಜೀವನಕ್ಕೆ ಅವಶ್ಯವಾದ ವಸ್ತುಗಳನ್ನು ಖರೀದಿಸುವಾಗ ನಡೆಯುವ ಮೋಸ, ವಂಚನೆಗೆ ಒಳಗಾಗುವುದನ್ನು ತಡೆಯಲು ಜಾಗೃತರಾಗಬೇಕು.

         ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.ಗ್ರಾಹಕರು ಎಷ್ಟೇ ಜಾಗೃತರಾದರು ಒಂದೊಮ್ಮೆ ಮೋಸಹೋಗುವುದು ಸಹಜ. ಇಂತಹ ಸಂದರ್ಭದಲ್ಲಿ ಮೋಸ ಹೋದ ಯಾವುದೇ ಗ್ರಾಹಕನು ತನಗಾದ ನಷ್ಟವನ್ನು ಹಿಂಪಡೆಯಲು ಗ್ರಾಹಕ ವೇದಿಕೆಗೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಬಹುದು. ಪರಿಹಾರ ಕೇಳುವ ಒಟ್ಟು ಮೊತ್ತದ ಆಧಾರದ ಮೇಲೆ ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಮತ್ತು ರಾಷ್ಟ್ರ ಮಟ್ಟದಲ್ಲಿಯೂ ಈ ದೂರನ್ನು ಸಲ್ಲಿಸಲು ಅವಕಾಶವಿದೆ. ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಮತ್ತು ಗ್ರಾಹಕರ ಹಕ್ಕುಗಳನ್ನು ಕುರಿತು ಜಾಗೃತಿ ಮೂಡಿಸುವಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕರೆ ನೀಡಿದರು.

        ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ದೀಪಾ ಅತ್ತಿಗೇರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ. ಗೋವಿಂದ ಸ್ವಾಮಿ ಉಪಸ್ಥಿತರಿದ್ದರು. ವಕೀಲರಾದ ವಿ.ಎಫ್.ಕಟ್ಟೇಗೌಡರ್ ಉಪಾನ್ಯಾಸ ನೀಡಿದರು. ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಯೋಜನಾ ನಿರ್ದೇಶಕ ಎಸ್.ಹೆಚ್.ಮಜೀದ್ ಕಾರ್ಯಕ್ರಮ ನಿರೂಪಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link