ಬೆಂಗಳೂರು:
ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ.ರಟಕಲ್ ಐತಿಹಾಸಿಕ ಪುರಾಣ ಪ್ರಸಿದ್ಧ ಶ್ರೀ ರೇವಣ್ಣಸಿದ್ಧೇಶ್ವರರ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಮಂಗಳವಾರ ಸಂಜೆ ರಥೋತ್ಸವ ನಡೆದಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದ್ದು, ಚಿಂಚೋಳಿ ತಾಲೂಕಿನ ಕೊಟಗಿ ಗ್ರಾಮಕ್ಕೆ ಸೇರಿದ ಅನಿಲ್ ನಾಟೀಕಾರ(30) ಎಂಬಾತ ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.
ತೇರು ಎಳೆಯುತ್ತಿದ್ದ ವೇಳೆ ರಥಕ್ಕೆ ಕಾಲು ಸಿಲುಕಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








