ಬೆಂಗಳೂರು
ಆಂಬಿಡೆಂಟ್ ಸಂಸ್ಥೆಯ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಡಿ.4ಕ್ಕೆ ಮುಂದೂಡಿದೆ.
ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ದಿನೇಶ್ ಕುಮಾರ್ ಅವರ ಏಕಸದಸ್ಯ ಪೀಠ, ಮುಂದಿನ ವಿಚಾರಣೆಯವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸಿಸಿಬಿ ಪೊಲೀಸರಿಗೆ ಸೂಚನೆ ನೀಡಿದೆ.
ಜರ್ನಾರ್ಧನ ರೆಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಚಿಟ್ ಫಂಡ್ ಕಾಯ್ದೆಗೆ ಒಳಪಡುವುದಿಲ್ಲ. ಆದ್ದರಿಂದ ಈ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಬೇಕು ಎಂದು ವಾದಿಸಿದರು.
ಪ್ರಕರಣದ ಮತ್ತೊಬ್ಬ ಆರೋಪಿ ರಿಯಲ್ ಎಸ್ಟೇಟ್ ಉದ್ಯಮಿ ಅಲಿಖಾನ್ ಈಗಾಗಲೇ ನಮ್ಮ ವಶದಲ್ಲಿದ್ದು ವಿಚಾರಣೆ ನಡೆಸುತ್ತಿದ್ದೇವೆ. ಆದ್ದರಿಂದ ನ.29ರವರೆಗೆ ವಿಚಾರಣೆ ಮುಂದುವರಿಸಲು ಅವಕಾಶ ಕೊಡಬೇಕು ಎಂದು ಸಿಸಿಬಿ ಪರ ವಕೀಲ ಪ್ರಮೋದ್ ಚಂದ್ರ ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ಮನವಿಗೆ ಹೈಕೋರ್ಟ್ ಸಮ್ಮತಿ ಸೂಚಿಸಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ