ರಾಷ್ಟ್ರೀಯ ಪಕ್ಷಗಳಿಗೆ ಮತ ನೀಡದೆ ತಿರಸ್ಕರಿಸಿ : ಕಲ್ಕೆರೆ ಶ್ರೀನಿವಾಸ್

ತುಮಕುರು

        ಮಾಜಿ ಪ್ರಧಾನಿ ದೇವೇಗೌಡರದ್ದು ಕುಟುಂಬ ರಾಜಕಾರಣ. ಇವರ ಆಡಳಿತದಿಂದ ರಾಜ್ಯ ನಲುಗಿ ಹೋಗಿದೆ. ಕೋಮುವಾದಿ ಪಕ್ಷವಾದ ಬಿಜೆಪಿ ಅಭ್ಯರ್ಥಿ ನಾಲ್ಕು ಬಾರಿ ಸಂಸದರಾದರೂ ಯಾವುದೇ ಅಭಿವೃದ್ಧಿ ಆಗಿಲ್ಲ. ಇದರಿಂದ ಈ ಬಾರಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಎಂದು ಪಕ್ಷೇತರ ಅಭ್ಯರ್ಥಿ ಕಲ್ಕೆರೆ ಶ್ರೀನಿವಾಸ್ ಮನವಿ ಮಾಡಿದರು.

        ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಪಕ್ಷವು ರಾಜ್ಯದಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಮೈತ್ರಿ ಧರ್ಮದ ಪಾಲನೆಯಂತೆ ಜೆಡಿಎಸ್ ಪಕ್ಷ 8 ಸ್ಥಾನಗಳನ್ನು ಪಡೆದು ಕೊನೆ ಘಳಿಗೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಸ್ವಜಾತಿಯವರಿಗೆ ಬಿಟ್ಟುಕೊಟ್ಟಿದ್ದಾರೆ. ವಿಜಾಪುರ ಮೀಸಲು ಕ್ಷೇತ್ರದಲ್ಲಿ ಸಮುದಾಯಕ್ಕೆ ಟಿಕೆಟ್ ನೀಡಿ ಸಮುದಾಯಕ್ಕೆ ಅನ್ಯಾಯವೆಸಗಿದ್ದಾರೆ. ಬಡ್ತಿ ಮೀಸಲಾತಿ ವಿಚಾರದಲ್ಲಿ ಬೆಂಬಲ ನೀಡುವಲ್ಲಿ ಮೈತ್ರಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

        ತುಮಕೂರು ಕ್ಷೇತ್ರದಲ್ಲಿ ಜಿ.ಎಸ್.ಬಸವರಾಜು ಅವರು ನಾಲ್ಕು ಬಾರಿ ಸಂಸದರಾಗಿದ್ದರೂ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಅವರ ಆಡಳಿತಾವಧಿಯಲ್ಲಿ ದಲಿತ ಹಾಗೂ ಅಲ್ಪಸಂಖ್ಯಾತರ ಮೇಲೆ ದಾಳಿ, ಹಲ್ಲೆ, ಅತ್ಯಾಚಾರ, ಚರ್ಚ್ ಹಾಗೂ ಮಸೀದಿಗಳ ಮೇಲೆ ದಾಳಿ ನಡೆದರೂ ಸಹ ತುಟಿಬಿಚ್ಚದೆ ದೌರ್ಜನ್ಯವೆಸಗುವವರ ಪರವಾಗಿದ್ದಾರೆ. ಅಂತಹವರು ಈ ಬಾರಿ ಯಾವ ನೈತಿಕತೆಯಿಟ್ಟುಕೊಂಡು ಮತ ಕೇಳುತ್ತಿದ್ದಾರೆ. ಬಿಜೆಪಿಯವರು ಸಂವಿಧಾನ ವಿರೋಧಿಗಳಾಗಿದ್ದಾರೆ ಎಂದರು.

        ಶೈಕ್ಷಣಿಕ ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಹೆಚ್ಚಾಗುತ್ತಿದ್ದು, ಬಡವರಿಗೆ ಶಿಕ್ಷಣ ದೊರೆಯದ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಸರ್ಕಾರದಿಂದ 1ನೇ ತರಗತಿಯಿಂದ ಹಿಡಿದು 12ನೇ ತರಗತಿವರೆಗೆ ಉಚಿತ ಶಿಕ್ಷಣ ಕಲ್ಪಿಸುವ ಕಾರ್ಯ ಮಾಡುವ ಆಸೆಯನ್ನಿಟ್ಟು ಕೊಂಡಿದ್ದೇನೆ. ಇಷ್ಟೇ ಅಲ್ಲದೆ ಇನ್ನೂ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇದೆ ಎಂದು ಭರವಸೆ ವ್ಯಕ್ತ ಪಡಿಸಿದರು.ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸರ ಬೆಂಬಲಿಗ ರಾಜಣ್ಣ ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap