ಉಡುಪಿ
ದೇಶಾದ್ಯಂತ 2002ರಿಂದ 2003ರ ಮಧ್ಯೆ ಮುಚ್ಚಿದ ನಾಲ್ಕು ರೋಗಗ್ರಸ್ತ ಬೃಹತ್ ರಸಗೊಬ್ಬರ ಕೈಗಾರಿಕಾ ಕಂಪನಿಗಳ ಪುನಶ್ಚೇತನಕ್ಕೆ ಸರ್ಕಾರ ಕ್ರಮಕೈಗೊಂಡಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೈಗಾರಿಕೆಗಳ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ 14,000 ಕೋಟಿ ರೂ.ಅನುದಾನ ನೀಡಲಿದೆ ಎಂದು ತಿಳಿಸಿದರು ಈಗಾಗಲೇ ದೇಶದಲ್ಲಿ ಅಗತ್ಯವಿರುವ ಶೇಕಡಾ 80ರಷ್ಟು ರಸಗೊಬ್ಬರ ಉತ್ಪಾದಿಸಲಾಗುತ್ತಿದೆ.
ಪ್ರಧಾನ್ ಮಂತ್ರಿ ಜನೌಷಧಿ ಯೋಜನೆಯಲ್ಲಿ ಇನ್ನೂ ಕೆಲವು ಔಷಧಿಗಳನ್ನು ಸೇರಿಸಲಾಗುವುದು, ಇದು ಸಾರ್ವಜನಿಕರಿಗೆ ಅಗ್ಗದ ಬೆಲೆಗೆ ಖರೀದಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು, “ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ರಾಜ್ಯವು ಕೇಂದ್ರದಿಂದ ಹಣವನ್ನು ಪಡೆಯುತ್ತದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಕೇಂದ್ರವು ಯಾವಾಗಲೂ ಪ್ರವಾಹ ಪೀಡಿತ ರಾಜ್ಯದೊಂದಿಗೆ ಇರುತ್ತದೆ. ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ರಾಜ್ಯ ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ ಎಂದರು.
ರಾಜ್ಯದಲ್ಲಿ ಸರ್ಕಾರ ರಚಿಸಿದ ಮೊದಲ ದಿನದಿಂದಲೇ ಬಿಜೆಪಿ ಉಪಚುನಾವಣೆಯ ಸಿದ್ಧತೆ ನಡೆಸುತ್ತಿದೆ. ಅನರ್ಹ ಶಾಸಕರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








