ಚೆಕ್ ಡ್ಯಾಂಗಳ ಹಣ ಬಿಡುಗಡೆಗೆ ಮನವಿ

ತುರುವೇಕೆರೆ

        ತಾಲ್ಲೂಕಿನಲ್ಲಿ ಅಂತರ್ಜಲ ವೃದ್ಧಿಗಾಗಿ ನಿರ್ಮಿಸಿರುವ ಚೆಕ್ ಡ್ಯಾಂಗಳ ಹಣವನ್ನು ಬಿಡುಗಡೆಗೊಳಿಸಬೇಕೆಂದು ಜಿಲ್ಲಾಪಂಚಾಯ್ತಿ ಅಧ್ಯಕ್ಷೆ ಲತಾರವಿಕುಮಾರ್ ರವರಲ್ಲಿ ಹಲವಾರು ಗುತ್ತಿಗೆದಾರರು ಮನವಿ ಮಾಡಿಕೊಂಡರು.

     ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೇರಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಹಲವಾರು ಗುತ್ತಿಗೆದಾರರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷರನ್ನು ಭೇಟಿಯಾಗಿ ಕಳೆದ ಒಂದುವರೆ ವರ್ಷದ ಹಿಂದೆ ನಿರ್ಮಿಸಿರುವ ಚೆಕ್ ಡ್ಯಾಂನ ಹಣವನ್ನು ಇದೂವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಗುತ್ತಿಗೆದಾರರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿ, ತಾಲ್ಲೂಕು ಪಂಚಾಯ್ತಿಯ ಕಾರ್ಯನಿರ್ವಹಣಾಧಿಕಾರಿಗಳು ಚೆಕ್ ಡ್ಯಾಂ ನಿರ್ಮಾಣದ ಹಣವನ್ನು ಬಿಡುಗಡೆಗೊಳಿಸಬಾರದೆಂದು ಎಲ್ಲಾ ಪಂಚಾಯ್ತಿಗಳಿಗೆ ಆದೇಶ ನೀಡಿದ್ದಾರೆ ಎಂದು ಆರೋಪಿಸಿದರು.

      ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ಹಣ ನೀಡಬೇಕೆಂದು ಹೇಳಿ ತಮ್ಮಿಂದ ಹಣ ವಸೂಲು ಮಾಡುತ್ತಿದ್ದಾರೆಂದು ಹಲವಾರು ಮಂದಿ ತಮಗೆ ದೂರವಾಣಿ ಮೂಲಕ ದೂರಿದ್ದರಿಂದ ಖುದ್ದಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಕಾರ್ಯನಿರ್ವಹಣಾಧಿಕಾರಿ ಗಂಗಾಧರರನ್ನು ತರಾಟೆಗೆ ತೆಗೆದುಕೊಂಡು ತಮ್ಮ ಮೇಲೆ ಹಲವಾರು ಆರೋಪಗಳು ಕೇಳಿಬರುತ್ತಿವೆ. ಕೂಡಲೇ ಸರಿಪಡಿಸಿಕೊಳ್ಳದಿದ್ದಲ್ಲಿ ತೊಂದರೆಯಾಗುವುದು ಎಂದು ಜಿ.ಪಂ. ಅಧ್ಯಕ್ಷೆ ಲತಾರವಿಕುಮಾರ್ ಎಚ್ಚರಿಸಿದರು.

       ಮಾಯಸಂದ್ರ ಹೋಬಳಿ ಆನಡಗು ಗ್ರಾಮದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಂ ಅವೈಜ್ಞಾನಿಕವಾಗಿದೆ. ಸಂಗ್ರಹವಾಗುವ ನೀರು ರಸ್ತೆಯ ಮೇಲೆ ನಿಲ್ಲುತ್ತಿದೆ. ಇದರಿಂದ ಸಾರ್ವಜನಿಕರಿಗೆ ಓಡಾಡಲು ಕಷ್ಠವಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸಹ ಯಾವುದೇ ಪ್ರಯೋಜವಾಗಿಲ್ಲ ಎಂದು ದೂರಿದ ಮಾಯಸಂದ್ರ ಗ್ರಾಮ ಪಂಚಾಯ್ತಿ ಸದಸ್ಯ ಆನಡಗು ಕುಮಾರ್ ಚೆಕ್ ಡ್ಯಾಂನ ಕಾಮಗಾರಿಯನ್ನು ವೀಕ್ಷಿಸದೆ ಹಣ ಬಿಡುಗಡೆಗೊಳಿಸಬಾರದು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಲ್ಲಿ ಮನವಿ ಮಾಡಿದರು.

      ಗ್ರಾಮ ಪಂಚಾಯ್ತಿಯಿಂದ ಶಾಸಕರವರೆಗಿನ ಎಲ್ಲಾ ಜನಪ್ರತಿನಿಧಿಗಳಿಗೆ ತಾಲ್ಲೂಕು ಪಂಚಾಯ್ತಿಯ ಅಧಿಕಾರಿಗಳು ಗೌರವ ನೀಡಬೇಕು. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಕು. ತಪ್ಪಿದಲ್ಲಿ ಶಿಷ್ಠಾಚಾರ ಉಲ್ಲಂಘನೆಯಾಗುತ್ತದೆ ಎಂದು ಇಓ ಗಂಗಾಧರನ್‍ಗೆ ಸೂಚನೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link