ಚಿತ್ರದುರ್ಗ:
ವೀರಶೈವ ಲಿಂಗಾಯಿತ ಯುವ ವೇದಿಕೆಯಿಂದ ಜು.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಧರ್ಮಜಾಗೃತಿ ಸಮ್ಮೇಳನ ನಡೆಯಲಿದೆ ಎಂದು ವೀರಶೈವ ಲಿಂಗಾಯಿತ ಯುವ ವೇದಿಕೆ ಜಿಲಾಧ್ಯಕ್ಷ ಹೆಚ್.ಎಂ.ಮಂಜುನಾಥ್ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ವೀರಶೈವ ಲಿಂಗಾಯಿತ ಯುವ ವೇದಿಕೆ ರಾಜ್ಯಾಧ್ಯಕ್ಷ ಪ್ರಶಾಂತ್ ಕಲ್ಲೂರು ಇವರ ನೇತೃತ್ವದಲ್ಲಿ ನಡೆಯುವ ಧರ್ಮಜಾಗೃತಿ ಸಮ್ಮೇಳನಕ್ಕೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಿಂದ ಅಂದು ಬೆಳಿಗ್ಗೆ ಆರಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ವೀರಶೈವ ಲಿಂಗಾಯಿತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಕೆ.ಇ.ಬಿ.ಷಣ್ಮುಖಪ್ಪ ಮಾತನಾಡಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದಲ್ಲಿ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮ ಸ್ಥಾಪನೆಗೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಜಿಲ್ಲೆಯಾದ್ಯಂತ ವೀರಶೈವ ಲಿಂಗಾಯಿತ ಯುವಕರು ಹಾಗೂ ವೀರಶೈವರು ಹೆಚ್ಚಿನ ಸಂಖ್ಯೆಯಲ್ಲಿ ಧರ್ಮಜಾಗೃತಿ ಸಮ್ಮೇಳನದಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಶಕ್ತಿ ಪ್ರದರ್ಶಿಸುವಂತೆ ಕೋರಿದರು.ವೀರಶೈವ ಲಿಂಗಾಯಿತ ಯುವ ವೇದಿಕೆ ನಗರಾಧ್ಯಕ್ಷ ಷಣ್ಮುಖ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ, ಕರಿಬಸವಯ್ಯ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.