ಖರ್ಗೆಗೆ ಎಐಸಿಸಿ ಸಾರಥ್ಯ ವಹಿಸಲು ಆಗ್ರಹ

ದಾವಣಗೆರೆ:

   ಎಐಸಿಸಿ ಅಧ್ಯಕ್ಷರ ಸ್ಥಾನವನ್ನು ಮಲ್ಲಿಕಾರ್ಜುನ ಖರ್ಗೆಗೆ ನೀಡಬೇಕೆಂದು ಕಾಂಗ್ರೆಸ್ ಸತ್ಯಶೋಧನಾ ಸಮಿತಿಯ ಸದಸ್ಯರು ಆಗ್ರಹಿಸಿದ್ದಾರೆ.

     ನಗರದ ಬಾಪೂಜಿ ಅತಿಥಿಗೃಹದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ, ಕರ್ನಾಟಕಕ್ಕೆ ತಮ್ಮದೇ ಕೊಡುಗೆ ನೀಡಿರುವ ನೀಡಿರುವ ಹಾಗೂ ಸಂವಿಧಾನದ ಆಧಾರದ ಮೇಲೆ ಕೆಲಸ ಮಾಡಿರುವ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ ಎಐಸಿಸಿ ಸಾರಥ್ಯವಹಿಸಿದರೆ, ದೇಶಕ್ಕೂ ಹಾಗೂ ಕಾಂಗ್ರೆಸ್‍ಗೂ ಒಳ್ಳೆಯದಾಗಲಿದೆ ಎಂದು ಹೇಳಿದರು.

     ಸಮಿತಿಯ ಸಂಚಾಲಕ ಬಸವರಾಜ ರಾಯರೆಡ್ಡಿ, ರಾಹುಲ್ ಗಾಂಧಿ ಅವರ ಮೇಲೆ ಎಷ್ಟೇ ಒತ್ತಡ ಹಾಕಿದರೂ, ಲೋಕಸಭಾ ಚುನಾವಣೆಯ ಸೋಲಿನ ಹೊಣೆಹೊತ್ತು. ಎಐಸಿಸಿ ಅಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ಎಐಸಿಸಿ ಅಧ್ಯಕ್ಷರ ಗಾದಿಯಲ್ಲಿ, ಅಭಿವೃದ್ಧಿಯ ಬಗ್ಗೆ ಅಪಾರ ಚಿಂತನೆ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೂರಿಸಬೇಕೆಂದು ಒತ್ತಾಯಿಸಿದರು.

       ಸಮಿತಿಯ ಮತ್ತೋರ್ವ ಸದಸ್ಯ ವಿ.ಆರ್.ಸುದರ್ಶನ್ ಮಾತನಾಡಿ, ರಾಹುಲ್ ಗಾಂಧಿಯವರು ಎಐಸಿಸಿ ಅಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಬೇಸರವಾಗಿದೆ. ಆದರೆ, ರಾಷ್ಟ್ರೀಯ ಮತ್ತು ಸಾಮಾಜಿಕ ಜವಾಬ್ದಾರಿ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಿದರೆ, ಮುಂದಿನ ದಿನಗಳಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸಲು ಸಾಧ್ಯವಿದೆ ಎಂದರು.

      ಆರ್.ಧೃವನಾರಾಯಣ ಮಾತನಾಡಿ, ಕಾಂಗ್ರೆಸ್‍ನ ಹಿರಿಯ ನಾಯಕ 10 ವರ್ಷಗಳಲ್ಲಿ ಐದು ವರ್ಷ ಕೇಂದ್ರ ರೈಲ್ವೆ ಹಾಗೂ ಕಾರ್ಮಿಕ ಸಚಿವರಾಗಿ ಹಾಗೂ ಇನ್ನೂ ಐದು ವರ್ಷಗಳ ಕಾಲ ಸಂಸತ್‍ನ ವಿರೋಧ ಪಕ್ಷದ ನಾಯಕರಾಗಿ, ಸಂಸತ್‍ನಲ್ಲಿ ಅತ್ಯುತ್ತಮ ಸಂಸದೀಯ ಪಟುಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಖರ್ಗೆ ಅವರ ಕಾರ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಪ್ರಶಂಸೆ ವ್ಯಕ್ತಪಡಿಸಿದ್ದರು. ಹೀಗಾಗಿ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷರ ಸ್ಥಾನ ನೀಡಿದರೆ ಒಳ್ಳೆಯದು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link