ಚಳ್ಳಕೆರೆ

ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀಸೇವಾಲಾಲ್‍ರವರ 280ನೇ ಜಯಂತಿ ಆಚರಣೆ ಫೆ.17ರ ಭಾನುವಾರ ಮಧ್ಯಾಹ್ನ 12.30ಕ್ಕೆ ಇಲ್ಲಿನ ಬಿ.ಎಂ. ಸರ್ಕಾರಿ ಪ್ರೌಢಶಾಲಾ ಮೈದಾನದ ಬಯಲು ರಂಗಮಂದಿರದಲ್ಲಿ ನಡೆಯಲಿದೆ ಎಂದು ತಾಲ್ಲೂಕು ಬಂಜಾರ ನೌಕರರ ಅಧ್ಯಕ್ಷ ಗೋಪಾಲನಾಯ್ಕ ತಿಳಿಸಿದರು.
ಅವರು, ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ಸಿದ್ದತೆ ಹಾಗೂ ಯಶಸ್ಸಿ ಕುರಿತು ಮಾಹಿತಿ ನೀಡಿದ ಅವರು, ಸೇವಲಾಲ್ ಜಯಂತಿ ಬಂಜಾರ ಸಮುದಾಯ ಪ್ರಮುಖ ಹಬ್ಬವಾಗಿದ್ದು, ತಾಲ್ಲೂಕಿನ ಸಮಸ್ತ ಸಮುದಾಯದ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಮಹಿಳಾ ನಿರ್ದೇಶಕಿ ಗೀತಾಬಾಯಿ ಮಾತನಾಡಿ, ತಾಲ್ಲೂಕಿನ 33 ತಾಂಡಗಳಿಂದ ನೂರಾರು ಸಂಖ್ಯೆಯಲ್ಲಿ ಸಮುದಾಯದ ಬಂಧುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಸಂಘದ ಎಲ್ಲಾ ಪದಾಧಿಕಾರಿಗಳು ತಾಲ್ಲೂಕಿನಾದ್ಯಂತ ಪ್ರವಾಸ ಕೈಗೊಂಡು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂತ ಸೇವಲಾಲ್ ಜಯಂತಿ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.
ಸಮುದಾಯದ ಮುಖಂಡ ತಿಪ್ಪೇಸ್ವಾಮಿ, ಯಂಕ್ಯಾನಾಯ್ಕ ಮಾತನಾಡಿ, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ್ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು . ಇದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರವನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ನಾಯ್ಕ, ಪಿ.ತಿಪ್ಫೇಸ್ವಾಮಿ, ರಾಂಜಿನಾಯ್ಕ, ಕೃಷ್ಣನಾಯ್ಕ, ಎಸ್.ಗೋವಿಂದನಾಯ್ಕ, ಯಶ್ವಂತ್‍ನಾಯಕ, ವೀರಭದ್ರನಾಯ್ಕ, ಸಂತೋಷ, ರಂಗಸ್ವಾಮಿ, ಭದ್ರಿ ಮುಂತಾದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
