ಟಿ.ರಘುಮೂರ್ತಿಯವರಿಗೆ ಸಚಿವ ಸ್ಥಾನ ನೀಡುವಂತೆ ವರಿಷ್ಠರಲ್ಲಿ ಮನವಿ : ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್

ಚಳ್ಳಕೆರೆ

        ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕೇವಲ ಕೆಲವೇ ಷರ್ವಗಳ ಅವಧಿಯಲ್ಲಿ ಅಭಿವೃದ್ಧಿಯೂ ಸೇರಿದಂತೆ ಪಕ್ಷವನ್ನು ಸಂಘಟಿಸುವಲ್ಲಿ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮ ಸ್ಪಂದನೆ ನೀಡುವಲ್ಲಿ ನಿರೀಕ್ಷೆಗೂ ಮೀರಿ ಯಶಸ್ಸನ್ನು ಸಾಧಿಸಿರುವ ಜನಮನದ ಶಾಸಕರಾಗಿರುವ ಟಿ.ರಘುಮೂರ್ತಿಯವರಿಗೆ ಪ್ರಸ್ತುತ ಮೈತ್ರಿ ಕೂಟದ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ತಿಳಿಸಿದ್ದಾರೆ.

         ಅವರು ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದ 225 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರದ ನಿರ್ಗಮನ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ನೇತೃತ್ವದಲ್ಲಿ ಅಭಿವೃದ್ಧಿಯಲ್ಲಿ ಹೊಸ ಐತಿಹಾಸಿಕ ದಾಖಲೆಯನ್ನೇ ಹೊಂದಿರುವ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಶಾಸಕರಾಗಿದ್ಧಾರೆ. ಕಳೆದ 2008ರಲ್ಲಿ ಸರ್ಕಾರದ ಉನ್ನತ್ತ ಹುದ್ದೆಯನ್ನು ತ್ಯೆಜಿಸಿ ಕೇವಲ ಜನಸೇವೆಯ ಹಿತದೃಷ್ಠಿಯಿಂದ ಕಾಂಗ್ರೆಸ್ ಪಕ್ಷವನ್ನ ಸೇರಿ ಸುಮಾರು 10 ವರ್ಷಗಳ ಕಾಲ ಪಕ್ಷದ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ಯಶಸ್ಸಿಯಾಗಿದ್ಧಾರೆ.

        ಕಳೆದ 2008ರಲ್ಲಿ ಪಕ್ಷದ ಟಿಕೆಟ್ ನೀಡದೇ ಇದ್ದರೂ ಸಹ ಕ್ಷೇತ್ರದಾದ್ಯಂತ ಪಕ್ಷವನ್ನು ಸಂಘಟಿಸಿ 2013ರಲ್ಲಿ ಮೊದಲ ಬಾರಿ ಶಾಸಕರಾಗಿ ಪುನಃ 2018ರಲ್ಲಿ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯದ ಗಮನವನ್ನು ಸೆಳೆದಿದ್ಧಾರೆ. ಇವರ ಸಾಧನೆಯನ್ನು ಮೆಚ್ಚಿ ಬೆಂಗಳೂರಿನ ಪ್ರತಿಷ್ಠಿತ ವಿಶ್ವೇಶ್ವರಯ್ಯ ಪ್ರತಿಷ್ಠಾನ ಇವರಿಗೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

        2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ನಾಯಕರು ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರೂ ಸಹ ಚಿತ್ರದುರ್ಗ ಜಿಲ್ಲೆಯಲ್ಲಿ 4 ಕಾಂಗ್ರೆಸ್ ಪಕ್ಷದ ಶಾಸಕರು ಇದ್ದರೂ ಮೂರು ಶಾಸಕರು ಸೋಲು ಅನುಭವಿಸಿದರೂ ಹೆಚ್ಚು ಮತಗಳನ್ನು ಗಳಿಸಿ ಟಿ.ರಘುಮೂರ್ತಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ಧಾರೆ. ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿರೋಧ ಪಕ್ಷದ ನೇತಾರರು ಸಹ ರಘುಮೂರ್ತಿಯ ಅಭಿವೃದ್ದಿಪರ ಚಿಂತನೆಗಳಿಗೆ ಹೆಚ್ಚು ಗೌರವ ನೀಡುತ್ತಿದ್ಧಾರೆ. ಕ್ಷೇತ್ರದ ಸಮರ್ಥ ಶಾಸಕವೆಂಬ ಗೌರವ ಟಿ.ರಘುಮೂರ್ತಿಯವರದ್ದು.

        ಇತ್ತೀಚಿಗೆ ಆಂಧ್ರ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲೂ ಸಹ ಉಸ್ತುವಾರಿಯನ್ನು ವಹಿಸಿಕೊಂಡು ಕಾರ್ಯನಿರ್ವಹಿಸಿದ್ಧಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕೂಡ್ಲಗಿ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು ಆ ಭಾಗದಲ್ಲಿ ಪಕ್ಷ ಹೆಚ್ಚು ಮತಗಳಿಸಲು ಕಾರಣರಾಗಿದ್ದಾರೆ. ಇತ್ತೀಚೆಗೆ ನಡೆದ ಚಳ್ಳಕೆರೆ ನಗರಸಭೆಯ ಚುನಾವಣೆಯಲ್ಲಿ 31 ಸ್ಥಾನಗಳಲ್ಲಿ 16 ಸ್ಥಾನಗಳು ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾಗಿದ್ಧಾರೆ. ಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲೂ ಅಭಿವೃದ್ಧಿಯನ್ನು ಸಾಧಿಸುವ ಮೂಲಕ ಸಾರ್ವಜನಿಕರ ಗೌರವ ಹಾಗೂ ವಿಶ್ವಾಸಕ್ಕೆ ಪಾತ್ರವಾಗಿದ್ಧಾರೆ.

      ಪಕ್ಷದ ಅನೇಕ ನಾಯಕರೊಂದಿಗೆ ಉತ್ತಮ ಒಡನಾಟಹೊಂದಿರುವ ಇವರಿಗೆ ಸಚಿವ ಸ್ಥಾನ ನೀಡಿದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಲೋಪಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹೆಚ್ಚು ಉಪಯುಕ್ತವಾಗುತ್ತದೆ. ಈ ಹಿನ್ನೆಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠನೇತಾರರಾದ ರಾಜ್ಯ ಕೆಪಿಸಿಸಿ ವೀಕ್ಷಕರಾದ ಕೆ.ಸಿ.ವೇಣುಗೋಪಾಲ್‍ರವರಿಗೆ ಈ ಬಗ್ಗೆ ಮನವಿ ಮಾಡಿರುವುದಾಗಿ ಅವರು ತಿಳಿಸಿದ್ಧಾರೆ.

         ಈ ಹಿನ್ನೆಲ್ಲೆಯಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯ ಬಿ.ಎನ್.ಚಂದ್ರಪ್ಪನವರೊಂದಿಗೆ ಸಮಾಲೋಚಿಸಿ ಶಾಸಕ ಟಿ . ರಘು ಮೂರ್ತಿಯವರೊಂದಿಗೆ ಚರ್ಚಿಸಿ ಕೆಪಿಸಿಸಿ ನೇತಾರರಿಗೆ ರಘುಮೂರ್ತಿಯವರ ಸೇವೆಯ ಬಗ್ಗೆ ಮನವರಿಕೆ ಮಾಡಿದ್ದು, ಮುಂದಿನ ತಿಂಗಳು ಸಂಪುಟ ರಚನೆ ಸಂದರ್ಭದಲ್ಲಿ ಅವಕಾಶ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದ್ಧಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap