ವೀರಶೈವ ಲಿಂಗಾಯತ ಮುಖಂಡರಿಗೆ ಪ್ರಚಾರಕ್ಕೆ ಅಡ್ಡಿ ಪಡಿಸಿದವರ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ

ಚಳ್ಳಕೆರೆ

       ಇತ್ತೀಚೆಗೆ ತಾನೇ ಮುಕ್ತಾಯವಾದ ಲೋಕಸಭಾ ಚುನಾವಣೆಯಲ್ಲಿ ಕಳೆದ ಭಾನುವಾರ ಏ.21ರಂದು ದಾವಣಗೆರೆ ಲೋಕಸಭಾ ವ್ಯಾಪ್ತಿಯ ನೇರ್ಲಗಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಮುಖಂಡರುಗಳಿಗೆ ಚುನಾವಣಾ ಪ್ರಚಾರ ಕೈಗೊಳ್ಳದಂತೆ ಅಡ್ಡಿ ಪಡಿಸಿದ ದಾವಣಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ರಾಮಪ್ಪನವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚಳ್ಳಕೆರೆ ವೀರಶೈವ ಲಿಂಗಾಯತ ಯುವ ವೇದಿಕೆ ಅಧ್ಯಕ್ಷ ಯಲಗಟ್ಟೆ ವಿ.ಯೋಗೀಶ್ ರಾಜ್ಯ ಸರ್ಕಾರವನ್ನು ಒತ್ತಾಯ ಪಡಿಸಿದ್ದಾರೆ.

      ಈ ಬಗ್ಗೆ ಯುವ ವೇದಿಕೆ ವತಿಯಿಂದ ಶುಕ್ರವಾರ ತಹಶೀಲ್ದಾರ್‍ಗೆ ಮನವಿ ನೀಡಿ, ಚುನಾವಣೆ ಸಂದರ್ಭದಲ್ಲಿ ಪ್ರಚಾರ ಕೈಗೊಂಡಿದ್ದ ವೀರಶೈವ ಲಿಂಗಾಯತ ಮುಖಂಡರುಗಳಿಗೆ ಅಡ್ಡಿ ಪಡಿಸದರಲ್ಲೇ ಅವಾಬ್ಯ ಶಬ್ದಗಳಿಂದ ನಿಂಧಿಸಿದ್ಧಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲಾ ಸಮುದಾಯಕ್ಕೂ ಸಮಾನವಾದ ಹಕ್ಕು ಮತ್ತು ಕರ್ತವ್ಯಗಳಿರುತ್ತವೆ.

       ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಸಹ ತಾನು ಬಯಸಿದ ವ್ಯಕ್ತಿ ಅಥವಾ ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳಲು ನಮಗೆ ನಮ್ಮ ಸಂವಿಧಾನ ಅವಕಾಶ ನೀಡಿದೆ. ರಾಜ್ಯದಲ್ಲಿ ನೂರಾರು ವರ್ಷಗಳಿಂದ ಬದುಕಿ ಬಾಳುತ್ತಿರುವ ವೀರಶೈವ ಲಿಂಗಾಯತ ಸಮಾಜ ಪ್ರತಿ ಚುನಾವಣೆಯಲ್ಲೂ ತನ್ನದೇಯಾದ ನಿರ್ಧಾರದಿಂದ ಯೋಗ್ಯ ವ್ಯಕ್ತಿ ಮತ್ತು ಪಕ್ಷವನ್ನು ಆಯ್ಕೆ ಮಾಡುವ ಅಕಾಶವನ್ನು ಪಡೆದಿದೆ.

        ವಿಶೇಷವಾಗಿ ಸರ್ಕಾರದ ಸೂಚನೆಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ನಮ್ಮ ಸಮಾಜದ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ತಮ್ಮದೇಯಾದ ಕಾರ್ಯಕರ್ತರ ಪಡೆಯೊಂದಿಗೆ ಚುನಾವಣಾ ಕಾರ್ಯವನ್ನು ನಿರ್ವಹಿಸಿದ್ದು, ಈ ಬಗ್ಗೆ ಎಲ್ಲೂ ಯಾವುದೇ ರೀತಿಯ ಅಸಮದಾನವಾಗಲಿ, ತಕರರಾಗಲಿ ಉಂಟಾಗಿಲ್ಲ.

         ಆದರೆ, ದಾವಣಗೆರೆ ಜಿಲ್ಲೆ ನೇರ್ಲಗಿ ಗ್ರಾಮದಲ್ಲಿ ಮಾತ್ರ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವೈ.ರಾಮಪ್ಪ ಸಮುದಾಯದ ಮುಖಂಡರನ್ನು ಪ್ರಚಾರ ಕೈಗೊಳ್ಳದಂತೆ ನಿರ್ಬಂಧ ಹೇರಿ ಪ್ರಾಣ ಬೆದರಿಕೆ ಹಾಕಿರುವುದು ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಮಪ್ಪನವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಅವರು ತಿಳಿಸಿದರು.

         ಮನವಿ ಸ್ವೀಕರಿಸಿದ ತಹಶೀಲ್ದಾರ್ ತುಷಾರ್ ಬಿ.ಹೊಸೂರ್ ಮಾತನಾಡಿ, ಪ್ರತಿಯೊಂದು ಸಮುದಾಯವೂ ತನ್ನದೇಯಾದ ಕಟ್ಟುಪಾಡು ಮತ್ತು ನಿಯಮಗಳನ್ನು ಹೊಂದಿರುತ್ತದೆ. ಸಮಾಜದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸಂಘಟನೆಗಳು ಕಾರ್ಯನಿರ್ವಹಿಸುತ್ತವೆ.

        ವಿಶೇಷವಾಗಿ ವೀರಶೈವ ಲಿಂಗಾಯತ ಯುವ ವೇದಿಕೆ ಲೋಕಸಭಾ ಚುನಾವಣೆಯಲ್ಲಿ ಸಮುದಾಯ ಗುರುತಿಸಿದ ಪಕ್ಷ ಮತ್ತು ವ್ಯಕ್ತಿಯನ್ನು ಬೆಂಬಲಿಸುವ ಮೂಲಕ ತನ್ನ ಸಂಘಟನೆ ಬಲವರ್ಧನೆಗೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ. ಆದರೆ, ಪ್ರಚಾರಕ್ಕೆ ತಡೆಯೊಡಿದ ವ್ಯಕ್ತಿಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವುದು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ಧಾಗಿದೆ. ಈ ಹಿನ್ನೆಲೆಯಲ್ಲಿ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಗರ ಸಮಿತಿ ಅಧ್ಯಕ್ಷ ಎನ್.ಜಿ.ಪ್ರಸನ್ನಕುಮಾರ್, ಉಪಾಧ್ಯಕ್ಷ ವಿಭೂಸ್ವಾಮಿ, ಸಂಘಟನಾ ಕಾರ್ಯದರ್ಶಿ ಬಸವರಾಜು, ನಿರ್ದೇಶಕರಾದ ಮಹೇಶ್, ಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap