ಚಳ್ಳಕೆರೆ
ನಗರಸಭೆ ಚುನಾವಣೆ ಮುಗಿದು ನಾಲ್ಕು ತಿಂಗಳು ಕಳೆದರೂ ಸಹ ಯಾವುದೇ ಸಭೆ, ಕಾರ್ಯ, ಕಲಾಪಗಳು ನಡೆಯದ ಹಿನ್ನೆಲ್ಲೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಈ ಕೂಡಲೇ ನಗರಸಭೆಯ ಸಾಮಾನ್ಯ ಸಭೆಯನ್ನು ತುರ್ತಾಗಿ ಕರೆಯುವಂತೆ 24ನೇ ವಾರ್ಡ್ ಸದಸ್ಯೆ ಆರ್.ಮಂಜುಳಾ ಪ್ರಸನ್ನಕುಮಾರ್ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ಧಾರೆ.
ಸೋಮವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿದ ಅವರು, ನೂತನ ಜಿಲ್ಲಾಧಿಕಾರಿ ವಿನೋತ್ ಪ್ರಿಯಾರವರಿಗೆ ಮನವಿ ಪತ್ರ ನೀಡಿ, ಕಳೆದ ನಾಲ್ಕುತಿಂಗಳಿನಿಂದ ಜನರಿಂದ ಆಯ್ಕೆಯಾದ ನಾವುಗಳು ಪ್ರತಿನಿತ್ಯ ಅವರ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಲು ಸಾಧ್ಯವಾಗುತ್ತಿಲ್ಲ.
ಸಾರ್ವಜನಿಕರು ಯಾವುದೇ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವಲ್ಲಿ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ನಗರಸಭೆ ಆಡಳಿತಾಧಿಕಾರಿಯಾದ ತಾವುಗಳು ನಗರಸಭೆಯ 1964ರಕಲಂ ರಿತ್ಯಾ ಸಭೆಯನ್ನು ಕರೆಯುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ವಿನೋತ್‍ಪ್ರಿಯಾ ಶೀಘ್ರದಲ್ಲೇ ನಗರಸಭೆಯ ಸಾಮಾನ್ಯ ಸಭೆಯ ದಿನಾಂಕವನ್ನು ನಿಗದಿ ಪಡಿಸಿ ಎಲ್ಲಾ ಸದಸ್ಯರಿಗೆ ಮಾಹಿತಿ ನೀಡಲಾಗುವುದು. ಈ ಬಗ್ಗೆ ಒಂದೆರಡು ದಿನಗಳಲ್ಲಿ ನಗರಸಭಾ ಆಯುಕ್ತರಿಗೆ ಸೂಚನೆ ನೀಡುವುದಾಗಿ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಸದಸ್ಯೆ ಆರ್.ಮಂಜುಳಾ, ಆರ್.ಪ್ರಸನ್ನಕುಮಾರ್, ನಗರಸಭೆಯ ಜಿಲ್ಲಾ ಯೋಜನಾಧಿಕಾರಿ ರಾಜಶೇಖರನ್ನು ಸಹ ಭೇಟಿ ಮಾಡಿ ಮನವಿ ಪತ್ರ ಅರ್ಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ