ಅಬಕಾರಿ ನಿರೀಕ್ಷಕರಿಗೆ ಮನವಿ

ಮೊಳಕಾಲ್ಮುರು 

        ಪಟ್ಟಣ ಮತ್ತು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪರವಾನಿಗೆ ಪಡೆಯದೇ ಮಧ್ಯ ಮಾರಾಟ ಮಾಡುತ್ತಿರುವವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಸಮಿತಿ ವತಿಯಿಂದ ಅಬಕಾರಿ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದರು.

         ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಧ್ಯದ ಪರವಾನಿಗೆ ಪಡೆಯದೇ ಮಧ್ಯವನ್ನು ಮಾರಾಟ ಮಾಡುತ್ತಿದ್ದು, ಗ್ರಾಮೀಣ ಪ್ರದೇಶದ ಕಿರಾಣಿ ಅಂಗಡಿಗಳಲ್ಲಿ, ಮನೆಗಳಲ್ಲಿ ನೇರವಾಗಿ ಮಧ್ಯವನ್ನು ಮಾರಾಟ ಮಾಡುತ್ತಿದ್ದಾರೆ. ಇದರಿಂದ ಮಾನವನ ಬದುಕನ್ನು ಅಸ್ಥವ್ಯಸ್ಥಗೊಳಿಸುವುದರ ಜೊತೆಯಲ್ಲಿ ಅನೇಕ ಕುಟುಂಬಗಳು ಬೀದಿಗೆ ಬೀಳುತ್ತಿವೆ.

          ಇತ್ತೀಚೆಗೆ ಗಂಡಸರು ಹೆಂಗಸರು ಅನ್ನದೆ , ಯುವಕರಲ್ಲೂ ಈ ಚಟ ಇನ್ನೂ ಹೆಚ್ಚಾಗುತ್ತಿದ್ದು ಹಾಗೂ ಶಾಲೆಗಳ ಅಕ್ಕ ಪಕ್ಕದ ಅಂಗಡಿಗಳಲ್ಲಿ ಮಧ್ಯ ಮಾರಾಟವಾಗುತ್ತಿದೆ. ಇದರಿಂದ ಮಹಿಳೆಯರು ಮತ್ತು ಮಕ್ಕಳ ಕಲಿಕೆಗೆ ನಕಾರಾತ್ಮಕ ಪರಿಣಾಮಗಳು ಉಂಟಾಗುತ್ತಿವೆ. ಕುಡಿದರೆ ಮಧ್ಯಪಾನ ಮರಣಕ್ಕೆ ಆಹ್ವಾನ ಎಂಬಂತೆ ಇದರಿಂದ ತಮ್ಮ ಮಕ್ಕಳ ಮೇಲೆ ಹಲವು ರೀತಿಯಲ್ಲಿ ದುಷ್ಪರಿಣಾಮಗಳು ಬೀರುತ್ತಿವೆ.

          ಆರ್ಥಿಕ ಪರಿಸ್ಥಿತಿ ಸುಧಾರಣೆ ಕಂಡುಬರುತ್ತಿಲ್ಲ. ಆದುದರಿಂದ ಪರವಾನಿಗೆ ಇಲ್ಲದೆ ಮಧ್ಯ ಮಾರಾಟ ಮಾಡುವವರ ವಿರುದ್ದ ಕಾನೂನಾತ್ಮಕವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಪದಾಧಿಕಾರಿಗಳಾದ ಬಸಣ್ಣ , ಧನುಂಜಯ , ಶ್ರೀಧರ್ ಹಾಗೂ ಮುಂತಾದವರು ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link