ಎಸ್ಟಿ ಮೀಸಲಾತಿ ಹೆಚ್ಚಿಸಲು ಆಗ್ರಹ.

ಹೊಸಪೇಟೆ :

      ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲಿ ಎಸ್ಟಿ ಮೀಸಲಾತಿ 7.5ಕ್ಕೆ ಹೆಚ್ಚಿಸಬೇಕು. ಅನರ್ಹರಿಗೆ ಎಸ್ಟಿ ಮೀಸಲಾತಿ ಪ್ರಮಾಣ ಪತ್ರ ನೀಡುವುದನ್ನು ತಡೆಯಬೇಕು ಎಂದು ಗುರುವಾರ ತಾಲೂಕು ವಾಲ್ಮೀಕಿ ಸಮಾಜದ ಮುಖಂಡರು ಸರ್ಕಾರವನ್ನುಆಗ್ರಹಿಸಿದರು.
ಇಲ್ಲಿನ ವಾಲ್ಮೀಕಿ ವೃತ್ತದಿಂದ ರೋಟರಿ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

       ಈ ವೇಳೆ ಸಮಾಜದ ವಾಲ್ಮೀಕಿ ಸಮಾಜದ ಅಧ್ಯಕ್ಷ ಗುಜ್ಜಲ ಶಿವರಾಮಪ್ಪ ಮಾತನಾಡಿ, ರಾಜ್ಯದಲ್ಲಿ ವಾಲ್ಮೀಕಿ ಸಮಾಜಕ್ಕೆ ರಾಜಕೀಯವಾಗಿ ಮಾತ್ರ 7.5 ಮೀಸಲಾತಿ ನೀಡಲಾಗಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಇಲ್ಲ. ಎಸ್ಟಿಗೆ ಸೇರದ ಅನರ್ಹರಿಗೆ ಎಸ್ಟಿ ಪ್ರಮಾಣಪತ್ರ ನೀಡಬಾರದು. ಒಂದು ವೇಳೆ ಪಡೆದವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಬಳಿಕ ತಹಶೀಲ್ದಾರ್ ಎಚ್.ವಿಶ್ವನಾಥ ಅವರಿಗೆ ಮನವಿ ಸಲ್ಲಿಸಲಾಯಿತು.

      ಈ ಸಂಧರ್ಭದಲ್ಲಿ ಸಮಾಜದ ಮುಖಂಡರಾದ ಮರಡಿ ಜಂಬಯ್ಯನಾಯಕ, ಬಿ.ಎಸ್.ಜಂಬಯ್ಯನಾಯಕ, ಗುಜ್ಜಲ ನಿಂಗಪ್ಪ, ತಾಯಪ್ಪನಾಯಕ, ಗುಜ್ಜಲ ರಘು, ನಾಣಿಕೇರಿ ತಿಮ್ಮಯ್ಯ, ತಾರಳ್ಳಿ ವೆಂಕಟೇಶ್ ಸೇರಿದಂತೆ ಇತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link