ದಾವಣಗೆರೆ:
ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶ್ರೀಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ನಗರದಲ್ಲಿ ಗುರುವಾರ ಜೈ ಕರುನಾಡ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ಶ್ರೀಗಳಿಗೆ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದಂದು ಭಾರತ ಸರ್ಕಾರದಿಂದ ಕೊಡ ಮಾಡುವ ಅತ್ಯುನ್ನತ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಟಿ. ಮಂಜುನಾಥ ಗೌಡ, ಹೆಚ್. ಪರಶುರಾಮ್ ನಂದಿಗಾವಿ, ಎನ್. ಅನಿಲ್, ರಾಘವೇಂದ್ರ ಶೆಟ್ಟಿ, ಎಸ್. ಕಿರಣ್, ಸಿ.ಕೆ. ಶ್ರೀನಿವಾಸ್, ಜಿ.ಎಸ್. ರುದ್ರೇಶ್, ಸಚ್ಚಿನ್ಕುಮಾರ್, ಮಂಜು, ಪವನ್ ಕುಮಾರ್, ನಾರಾಯಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
