ಕಾಮಗಾರಿಗಳಿಗೆ ಅನುದಾನ ಒದಗಿಸುವಂತೆ ಪ್ರಸ್ತಾವನೆ

ಹೊನ್ನಾಳಿ:

        ತುಂಗಭದ್ರಾ ನದಿ ಪಾತ್ರದ ಎರಡೂ ಬದಿ ಹೊನ್ನಾಳಿ, ಸಾಸ್ವೆಹಳ್ಳಿ, ಚೀಲೂರು ಭಾಗಗಳಲ್ಲಿ ನದಿಗೆ ತಡೆಗೋಡೆ ನಿರ್ಮಿಸಲು ಸಣ್ಣ ನೀರಾವರಿ ಇಲಾಖಾ ಸಚಿವರೊಡನೆ ಚರ್ಚಿಸಲಾಗಿದ್ದು, ಮೂರು ಕಡೆ ತಡೆಗೋಡೆ, ಎರಡು ಕಡೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 350 ಕೋಟಿ ರೂ.ಗಳಷ್ಟು ಅನುದಾನ ಮಂಜೂರು ಮಾಡುವಂತೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

          ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಅವರನ್ನು ಭೇಟಿ ಮಾಡಿ ಚರ್ಚಿಸಿ, ಕಾಮಗಾರಿಗಳಿಗೆ ಅನುದಾನ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.ಕ್ಷೇತ್ರ ವ್ಯಾಪ್ತಿಯ ತುಂಗಭದ್ರಾ ನದಿಯ ಪಾತ್ರದಲ್ಲಿ ಮಳೆಗಾಲದ ಆರಂಭದ ದಿನಗಳಲ್ಲಿ ನದಿಯಲ್ಲಿ ಪ್ರವಾಹ ಹಾಗೂ ಇತರ ಕಾರಣಗಳಿಂದ ಈ ಪ್ರದೇಶದಲ್ಲಿನ ಮನೆಗಳಿಗೆ ಪ್ರತಿ ಮಳೆಗಾಲದ ಆರಂಭದಲ್ಲಿ ನೀರು ನುಗ್ಗಿ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗುತ್ತದೆ.

           ಜನರ ಹಿತದೃಷ್ಟಿಯಿಂದ ಶಾಶ್ವತ ಪರಿಹಾರಕ್ಕಾಗಿ ನದಿಪಾತ್ರದ ಹೊನ್ನಾಳಿ ಪಟ್ಟಣ, ಚೀಲೂರು ಸಾಸ್ವೆಹಳ್ಳಿ ವ್ಯಾಪ್ತಿಯಲ್ಲಿ ಶಾಶ್ವತ ತಡೆಗೋಡೆ ನಿರ್ಮಿಸುವುದು ಮತ್ತು ಗೋವಿನಕೋವಿ-ರಾಂಪುರ ಗ್ರಾಮಗಳ ಮಧ್ಯ ಭಾಗದಲ್ಲಿ ಹಾಗೂ ಬಳ್ಳೇಶ್ವರ-ಗೋಣಿಗೆರೆ ಗ್ರಾಮಗಳ ನಡುವೆ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗಳು ಸೇರಿದಂತೆ ಯೋಜನೆಗೆ ಒಟ್ಟು 350 ಕೋಟಿ ರೂಗಳಷ್ಟು ಹಣ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ.

           ಇದರಲ್ಲಿ ಎರಡೂ ತಾಲೂಕುಗಳಲ್ಲಿ ಅಗತ್ಯವಿರುವ ಕಡೆ ಚೆಕ್‍ಡ್ಯಾಂ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿ ನಡೆಸಲು ಸಚಿವರೊಡನೆ ಚರ್ಚಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಡಿಪಿಆರ್ ತಯಾರಿಸುವಂತೆ ಸೂಚಿಸಲು ಮನವಿ ಮಾಡಲಾಗಿದೆ. ಸಚಿವರು ಇದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ವಿವರಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

 

Recent Articles

spot_img

Related Stories

Share via
Copy link