ಚಳ್ಳಕೆರೆ
ರಾಯಚೂರಿನ ನವೋದಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಮಧು ಪತ್ತಾರ್‍ರವರ ಅಮಾನುಷ ಸಾವಿನ ಬಗ್ಗೆ ತನಿಖೆಯನ್ನು ತ್ವರಿತಗೊಳಿಸಿ ಆರೋಪಿಗೆ ತಕ್ಕ ಶಿಕ್ಷೆ ವಿಧಿಸಬೇಕು, ವಿದ್ಯಾರ್ಥಿನಿಯ ಸಾವಿಗೆ ಕಾರಣರಾದ ವ್ಯಕ್ತಿಯ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ತಹಶೀಲ್ದಾರ್‍ಗೆ ಮನವಿ ನೀಡಿ ಆಗ್ರಹ ಪಡಿಸಿದೆ.
ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಜಿ ಜನಾರ್ಥನ ನೇತೃತ್ವದಲ್ಲಿ ಎಬಿವಿಪಿ ಕಾರ್ಯಕರ್ತರು ತಹಶೀಲ್ದಾರ್ ತುಷಾರ್ ಬಿ.ಹೊಸೂರ್‍ರವರಿಗೆ ಮನವಿ ನೀಡಿ ಏ.14ರಂದು ಮಧು ಪತ್ತಾರ್ ಕಾಣೆಯಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ದೊರಕಿದ್ದು, ಇವರ ಸಾವಿಗೆ ಕಾರಣ ಕರ್ತರಾದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಲಾಯಿತು.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ತುಷಾರ್ ಬಿ.ಹೊಸೂರ್, ನಿಮ್ಮ ಮನವಿಯನ್ನು ಸ್ವೀಕರಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕ ಭಾನುಪ್ರಸಾದ್ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.