ಚಿತ್ರದುರ್ಗ;
ದಲಿತ ಸಂಘಟನೆಕಾರರು ಮತ್ತು ದಲಿತರ ಸಮುದಾಯಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣ ಹರಿಬಿಟ್ಟಿರುವ ಪುನೀತ್ ಕೆರೆಹಳ್ಳಿ ವಿರುದ್ದ ಕಾನೂನು ಕ್ರಮ್ಕಕೆ ಒತ್ತಾಯಿಸಿ ಅಂಬೇಡ್ಕರ್ ಸೇನೆ(ರಿ.) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪುನೀತ್‍ಕೆರೆಹಳ್ಳಿ ಎಂಬ ವ್ಯಕ್ತಿಯು ತನ್ನ ಸಾಮಾಜಿಕ ಜಾಲತಾಣವಾದ ಫೇಸ್‍ಬುಕ್‍ನಲ್ಲಿ ದಿ:13-01-2020ರಂದು ದಲಿತ ಹೋರಾಟಗಾರರು ಹಾಗೂ ದಲಿತ ಸಮುದಾಯದವರು ಮಿಶ್ರ ತಳಿಗಳು ಎಂದು ನಾಲಿಗೆ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ. ದಲಿತ ಹೋರಾಟಗಾರರ ವಿರುದ್ದ ಅಪ ಪ್ರಚಾರ ಮಾಡಿ, ಡಾ.ಬಿ.ಆರ್. ಅಂಬೇಡ್ಕರ್‍ರವರ ಹೆಸರಿಗೆ ಧಕ್ಕೆ ಬರುವಂತಹ ಪೋಸ್ಟ್‍ಗಳನ್ನು ಪೋಸ್ಟ್ ಮಾಡಿ ವಾರಗಳೇ ಕಳೆದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಈ ಕೂಡಲೇ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳದಿದ್ದರೆ ಜಿಲ್ಲಾಧ್ಯಂತ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದೆಂದು ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್.ಎ ತಾಳಿಕೆರೆಯವರು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಪಿ.ಶ್ರೀನಿವಾಸ್‍ಮೂರ್ತಿ, ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥ್.ಟಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಅನಂತ್‍ಕುಮಾರ್, ಜಿಲ್ಲಾ ಕಾರ್ಯದರ್ಶಿ ಚಂದ್ರಪ್ಪ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ರೇವಣಸಿದ್ದಪ್ಪ ಬಿ.ಕಲ್ಕುಂಟೆ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರಾದ ಅನಿಲ್‍ಕುಮಾರ್, ಹೊಸದುರ್ಗ ತಾಲ್ಲೂಕು ಅಧ್ಯಕ್ಷರಾದ ಗಿರೀಶ್, ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಟಿ.ಮಲ್ಲಿಕಾರ್ಜುನ್, ಚಿತ್ರದುರ್ಗ ತಾಲ್ಲೂಕು ಪ್ರಧಾನಿ ಕಾರ್ಯದರ್ಶಿ ಹಾಲೇಶ್, ಹಿರೇಗುಂಟನೂರು ಹೋಬಳಿ ಅಧ್ಯಕ್ಷ ನರಸಿಂಹಮೂರ್ತಿ, ಸುನೀಲ್, ಸಿದ್ದೇಶ್, ರಮೇಶ.ಕೆ. ಶ್ರೀಧರ್.ಇ.ಎಸ್, ಮಾರುತಿ.ಎಸ್, ಮಂಜುನಾಥ್.ಎನ್, ಪ್ರವೀಣ, ಅರುಣ್‍ಕುಮಾರ್, ಅಂಜನ್ ಮೂರ್ತಿ, ರಂಗಸ್ವಾಮಿ, ತಿಪ್ಪೇಸ್ವಾಮಿ, ಹರೀಶ್, ಪ್ರದೀಪ್‍ಕುಮಾರ್, ತಿಪ್ಪೇಸ್ವಾಮಿ.ಕೆ, ಮಹಂತೇಶ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ