ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಒತ್ತಾಯ

ತಿಪಟೂರು

      ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಬೇಕೆನ್ನುವುದು ಪಕ್ಷದ ಎಲ್ಲಾ ಕಾರ್ಯಕರ್ತರ ಒತ್ತಾಸೆಯಾಗಿದೆ. ಈ ಬಗ್ಗೆ ಪಕ್ಷದ ವರಿಷ್ಠರಲ್ಲಿಯೂ ಮನವಿ ಮಾಡಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ಸಿಗುತ್ತದೆ ಎನ್ನುವ ನಂಬಿಕೆ ಇದೆ ಎಂದು ತಾಲ್ಲೂಕು ಕಾಂಗ್ರೆಸ್ ವಕ್ತಾರ ಕೆ.ಎಸ್. ಸದಾಶಿವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

        ರಾಜ್ಯದಲ್ಲಿ ಮೈತ್ರಿ ಪಕ್ಷದ ಸರ್ಕಾರವಿದ್ದು ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್-ಜೆಡಿಎಸ್ ಮೈತ್ರಿಯೊಂದಿಗೆ ನಾವು ಎದುರಿಸುತಿದ್ದೇವೆ. ಯಾವ ಕ್ಷೇತ್ರದಲ್ಲಿ ಯಾರೆ ಅಭ್ಯರ್ಥಿಯಾದರೂ ಎರಡು ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಬಡವರು, ದುರ್ಬಲರು, ದಲಿತರು ಮತ್ತು ರೈತರನ್ನು ಕಡೆಗಣಿಸುತ್ತಿದೆ. ರಾಹುಲ್‍ಗಾಂಧಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಕನಿಷ್ಠ ಆದಾಯ ಗ್ಯಾರಂಟಿ ಕಾಯ್ದೆ ಜಾರಿಗೊಳಿಸಲಿದ್ದು, ಎಲ್ಲಾ ವರ್ಗದ ಜನರ ಪರವಾಗಿ ಕೆಲಸ ಮಾಡಲಿದ್ದಾರೆ. ಪ್ರತಿಯೊಬ್ಬರ ಖಾತೆಗೆ ಕನಿಷ್ಠ ಆದಾಯ ನೇರವಾಗಿ ಜಮೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ